ಮನರಂಜನೆ

ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಅನುರಾಗ್‌ ಕಶ್ಯಪ್‌

ದಕ್ಷಿಣ ಸಿನಿರಂಗದತ್ತ ಬಾಲಿವುಡ್‌ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಸೇರ್ಪಡೆಯಾಗಿದ್ದಾರೆ.

ಅನುರಾಗ್‌ ಕಶ್ಯಪ್‌ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್‌ʼ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಅವರು, ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಹಾಸ್ಯ ನಟ-ನಿರ್ದೇಶಕ ಸಂಜಯ್‌ ಶಾಸ್ತ್ರಿ ನಿರ್ದೇಶನ ಮಾಡುತ್ತಿರುವ ಕನ್ನಡದ ‘8’ ಸಿನಿಮಾದಲ್ಲಿ ಅನುರಾಗ್‌ ಕಶ್ಯಪ್‌ ನಟಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ‘8’ ಸಿನಿಮಾದ ಟೈಟಲ್‌ ಲಾಂಚ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಇದೊಂದು ಎಮೋಷನಲ್‌ ಕಥೆಯಾಗಿದ್ದು, ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ಅರವಿಂದ್‌ ಹಾಗೂ ಸಂಜಯ್‌ ಅವರಿಗೆ ಧನ್ಯವಾದ ಎಂದರು.

ಫುಟ್‌ಬಾಲ್‌ ಆಟದ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ. ಎವಿಆರ್‌ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾದ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ಅರವಿಂದ್‌ ವೆಂಕಟೇಶ್‌ ರೆಡ್ಡಿ ಹಣ ಹೂಡುತ್ತಿದ್ದು, ನಾಯಕ ನಟನಾಗಿ ಬಿಗ್‌ಬಾಸ್‌ ಖ್ಯಾತಿಯ ಮಹೇಶ್‌ ಕಾರ್ತಿಕ್‌ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago