ಮನರಂಜನೆ

ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್‍ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರಕ್ಕೆ ಅದೇ ನಂದಿ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿರುವುದು ವಿಶೇಷ. ಈ ಚಿತ್ರಕ್ಕೆ ‘ಡ್ಯಾಡ್‍’ ಎಂದು ಹೆಸರಿಡಲಾಗಿದ್ದು, ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಈ ಚಿತ್ರವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಹರೀಶ್‍ ಪೆದ್ದಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ ತೆಲುಗಿನಲ್ಲಿ ‘ಭಗವಂತ್‍ ಕೇಸರಿ’, ‘ಉಗ್ರಂ’, ‘ಟಕ್‍ ಜಗದೀಶ್‍’ ಮುಂತಾದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ನಿರ್ದೇಶಕ ಅನಿಲ್‍ ಕನ್ನೆಗಂಟಿ ಸಹ ತೆಲುಗು ಮೂಲದವರಾಗಿದ್ದು, ಅವರು ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ-ಚಿತ್ರಕಥೆಯನ್ನೂ ಅವರೇ ರಚಿಸಿದ್ದಾರೆ.

ಇದೊಂದು ತಂದೆ ಸೆಂಟಿಮೆಂಟ್‍ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್‍ ಅಂಶಗಳು ಇರಲಿವೆ. ಶಿವರಾಜಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

‘ಡ್ಯಾಡ್‍’ ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತವಿದೆ. ಬಿ. ರಾಜಶೇಖರ್ ಛಾಯಾಗ್ರಹಣವಿರುವ ಈ ಚಿತ್ರ ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago