At Last, Omprakash Rao Completes Shooting of the Film ‘Phoenix’
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ನಿರ್ದೇಶನದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಲಿಲ್ಲ.
ಈ ಮಧ್ಯೆ, ಅವರು ಕೆಲವು ಚಿತ್ರಗಳನ್ನು ಘೋಷಿಸಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಘೋಷಣೆಯಾದ ಚಿತ್ರಗಳು ಬಿಡುಗಡೆಯಾಗಿದ್ದರೆ, ಅವರು ಇಷ್ಟರಲ್ಲಿ ಹಾಫ್ ಸೆಂಚ್ಯುರಿ ಮುಗಿಸಿರುತ್ತಿದ್ದರು. ಕಾರಣಾಂತರಗಳಿಂದ ಅದು ತಡವಾಗಿ, ಅವರು ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ್ದ 49ನೇ ಚಿತ್ರವಾದ ‘ಫೀನಿಕ್ಸ್’ ಇದೀಗ ಮುಕ್ತಾಯವಾಗಿದೆ.
ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರ ‘ಫೀನಿಕ್ಸ್’. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ ‘ಫೀನಿಕ್ಸ್’ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.
ಈ ಚಿತ್ರನ ನಿರ್ದೇಶನದ ಜೊತೆಗೆ ಓಂಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ‘ಫೀನಿಕ್ಸ್’ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.
‘ಫೀನಿಕ್ಸ್’ ಕುರಿತು ಮುಹೂರ್ತ ಸಂದರ್ಭದಲ್ಲಿ ಮಾತನಾಡಿದ್ದ ಓಂಪ್ರಕಾಶ್ ರಾವ್, ‘ಇದೊಂದು ಮಹಿಳಾ ಪ್ರಧಾನ ಚಿತ್ರ. ಮೊದಲ ಬಾರಿಗೆ ನಾನು ಕ್ರೈಮ್ ಥ್ರಿಲ್ಲರ್ ಚಿತ್ರ ಮಾಡುತ್ತಿದ್ದೇನೆ. ಈ ಚಿತ್ರವು ಕೆಲವು ನೈಜ ಘಟನೆಗಳನ್ನು ಆಧರಿಸಿದೆ’ ಎಂದು ಹೇಳಿದ್ದರು.
‘ಫೀನಿಕ್ಸ್’ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ‘ಸಿದ್ಲಿಂಗು’ ಶ್ರೀಧರ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…
ಭೇರ್ಯ ಮಹೇಶ್ ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…