ಮನರಂಜನೆ

‘ಬಲರಾಮನ’ ಜೊತೆಯಾದ ಅತುಲ್ ಕುಲಕರ್ಣಿ ಮತ್ತು ಆಶಿಶ್‍ ವಿದ್ಯಾರ್ಥಿ

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ.

ಈಗ ಬಹಳ ವರ್ಷಗಳ ನಂತರ ವಿನೋದ್‍ ಪ್ರಭಾಕರ್‍ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ್ದಾರೆ. ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಇಬ್ಬರೂ ಬಹುಭಾಷಾ ನಟರು. ಇಬ್ಬರೂ ಕನ್ನಡದವಲ್ಲದೆ ಬೇರೆ ಭಾಷೆಗಳಲ್ಲೂ ನಟಿಸಿದವರು. ಈಗ ಕನ್ನಡ ಚಿತ್ರದಲ್ಲಿ ಅವರಿಬ್ಬರೂ ಜೊತೆಯಾಗುತ್ತಿರುವುದು ವಿಶೇಷ.

‘ಆ ದಿನಗಳು’ ಚಿತ್ರವು ನೈಜ ಘಟನೆಗಳನ್ನಾಧರಿಸಿದ ಚಿತ್ರವಾಗಿತ್ತು. ಆದರೆ, ‘ಬಲರಾಮನ ದಿನಗಳು’ 80ರ ದಶಕದಲ್ಲಿ ನಡೆಯುವ ಒಂದು ಕಾಲ್ಪನಿಕ ಕಥೆಯಾಗಿದೆ. ಇದು ಸಹ ಒಂದು ರೌಡಿಸಂ ಕಥೆಯಾಗಿದ್ದು, ಯಾವುದೇ ನೈಜ ಘಟನೆಯನ್ನಾಧರಿಸಿದ ಒಂದು ಕಾಲ್ಪನಿಕ ಕಥೆಯಂತೆ. ಈ ಚಿತ್ರವು ಕಳೆದ ವರ್ಷವೇ ಘೋಷಣೆಯಾಗಿತ್ತು. ಇದೀಗ ಮೈಸೂರಿನಲ್ಲಿ ಸತತವಾಗಿ ಚಿತ್ರೀಕರಣ ನಡೆಯುತ್ತಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಮುಗಿಯಲಿದೆ. ಇತ್ತೀಚೆಗೆ ನಡೆದ ಚಿತ್ರೀಕರಣದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಇಬ್ಬರೂ ವಿನೋದ್‍ ಪ್ರಭಾಕರ್‍ ಜೊತೆಯಾಗಿ ನಟಿಸಿದ್ದಾರೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಆ ದಿನಗಳು’ ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌.

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ.

ಭೂಮಿಕಾ

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

4 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

5 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

5 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

5 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

6 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

6 hours ago