ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ ಮಾಡಿದೆ.
ಈ ಕುರಿತು ಬುಧವಾರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಪ್ರತಿವರ್ಷ ಇನ್ನು ಮುಂದೆ ಬಿ.ಸರೋಜಾ ದೇವಿ ಗೌರವಾರ್ಥವಾಗಿ ಅಭಿನಯ ಸರಸ್ವತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದೆ.
ಪ್ರಶಸ್ತಿಯು ರೂ. 1 ಲಕ್ಷ ರೂ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅದನ್ನು ಪರಿಗಣಿಸಿ ಅವರು ಪಡೆದಿದ್ದ ಅಭಿನಯ ಸರಸ್ಕೃತಿ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ.
ಕನ್ನಡ, ಹಿಂದಿ, ತಮಿಳು, ಹಾಗೂ ತೆಲುಗು ಸೇರಿದಂತೆ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿದ್ದ ಬಿ ಸರೋಜಿದೇವಿ ಅವರಿಗೆ ಅಭಿನಯ ಸರಸ್ವತಿ ಎಂಬ ಬಿರುದನ್ನು ನೀಡಲಾಗಿತ್ತು. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಇತ್ತೀಚಿಗಷ್ಟೇ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ನಾಗರೀಕ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿತ್ತು. ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬಿ ಸರೋಜಾ ದೇವಿಯವರು ವಯೋಸಹಜ ಕಾಯಿಲೆಯಿಂದ ಇತ್ತೀಚಿಗೆ ನಿಧನರಾಗಿದ್ದರು.
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…