ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್ ಕುಮಾರ್. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್ ಎಂದೇ ಜನಪ್ರಿಯರು. ಇದೀಗ ಮಹೇಶ್ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿದ್ದಾರೆ.
ಕಳೆದ ವರ್ಷದ ಸ್ವಲ್ಪ ದುಡ್ಡು ನೋಡಿದ ಚಿತ್ರವೆಂದರೆ, ಅದು ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’. ಸದ್ಯ, ‘ಲಕ್ಷ್ಮಿ ಪುತ್ರ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಚಿಕ್ಕಣ್ಣ, ಅದಾದ ಬಳಿಕ ಮಹೇಶ್ ನಿರ್ದೇಶನದ ದೇಸಿ ಸೊಗಡಿನ ಚಿತ್ರದಲ್ಲಿ ನಟಿಸಲಿದ್ದಾರೆ. ಇದು ಮಹೇಶ್ ನಿರ್ದೇಶನದ ನಾಲ್ಕನೇ ಚಿತ್ರವಾಗಿದ್ದು, ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.
ಸದ್ಯ ‘ಅಯೋಗ್ಯ 2’ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ಮಹೇಶ್, ಇದೀಗ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಚಿತ್ರದ ಬಿಡುಗಡೆ ಆಗಬೇಕಿತ್ತು. ಆಗಸ್ಟ್ 15ರಂದು ಚಿತ್ರ ಬಿಡುಗಡೆ ಎಂದು ಮಹೇಶ್ ಕಳೆದ ವರ್ಷವೇ ಹೇಳಿದ್ದರು. ಕಾರಣಾಂತರಗಳಿಂದ ಚಿತ್ರ ತಡವಾಗಿ, ಇನ್ನಷ್ಟೇ ಬಿಡುಗಡೆಯಾಗಿದ್ದಾರೆ.
ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಮುಹೂರ್ತ ಅಕ್ಟೋಬರ್ ತಿಂಗಳಲ್ಲಿ ನೆರವೇರಲಿದ್ದು, ಅದೇ ದಿನ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.
ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ವಿ. ಹರಿಕೃಷ್ಣ ಸಂಗೀತ, ಸುಧಾಕರ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಾಸ್ತಿ, ರಘು ನಿಡುವಳ್ಳಿ ಹಾಗೂ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…