ಮನರಂಜನೆ

ಕರ್ನಾಟಕದ ಸಂಸ್ಕೃತಿ, ಸಂಪ್ರದಾಯವನ್ನು ಅನಾವರಣಗೊಳಿಸುವ ‘ಅಯ್ಯನ ಮನೆ’

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ.

ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ZEE5ನಲ್ಲಿ ಸ್ಟ್ರೀಮ್‍ ಆಗುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸರಣಿಯನ್ನು ನಟಿ-ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಆ ಸರಣಿಗೆ ‘ಅಯ್ಯನ ಮನೆ’ ಎಂದು ಹೆಸರಿಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ.

ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಅಯ್ಯನ ಮನೆʼ ವೆಬ್‍ ಸರಣಿಯನ್ನು ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರಿ ಕಥೆಯಾಗಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಕುತೂಹಲಕ್ಕೀಡು ಮಾಡುತ್ತದೆ.

ಈ ಸರಣಿಯ ಕುರಿತು ಮಾತನಾಡುವ ರಮೇಶ್ ಇಂದಿರಾ, ‘ಅಯ್ಯನ ಮನೆ’ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ‘ಅಯ್ಯನ ಮನೆ’ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕೂರುವಂತೆ ಮಾಡುತ್ತದೆ’ ಎಂದಿದ್ದಾರೆ.

ಏಳು ಎಪಿಸೋಡ್ ಹೊಂದಿರುವ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಮುಂತಾದವರು ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿಯ ಸುತ್ತ ಸುತ್ತುವ ಕಥೆಯಾಗಿದ್ದು, ಇದೇ ತಿಂಗಳ 25ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

25 mins ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

45 mins ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

56 mins ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

1 hour ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

3 hours ago