ಮನರಂಜನೆ

ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ.

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ರಕ್ತ ಕಾಶ್ಮೀರ’ ಚಿತ್ರವು ಬಾಬು ಅವರ ವೃತ್ತಿಬದುಕಿನ ವಿಶೇಷ ಚಿತ್ರ ಎಂದರೆ ತಪ್ಪಿಲ್ಲ. ನಿರ್ದೇಶಕರಾಗಿ 50 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯಾ, ಮುಖೇಶ್‍ ರಿಷಿ, ರಿಯಾಜ್‍ ಖಾನ್‍ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಗುರುಕಿರಣ್‍ ಸಂಗೀತವಿದೆ. ಚಿತ್ರವನ್ನು ಕಾಶ್ಮೀರದಲ್ಲೇ ಚಿತ್ರೀಕರಣ ಮಾಡಲಾಗಿದೆ.

ಈ ವರ್ಷ ನನಗೆ ಬಹಳ ವಿಶೇಷ ಎನ್ನುವ ಬಾಬು, ‘ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಾನು ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಅದರಲ್ಲಿ ಮೊದಲು ‘ರಕ್ತ ಕಾಶ್ಮೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ‌‌‌. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು. ಉಪೇಂದ್ರ ಅವರು ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಮ್ಯ ಅವರು ಆರು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಸಹ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಅವರು ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ‌‌. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ’ ಎಂದರು.

ಇದನ್ನು ಓದಿ: ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಚಿತ್ರದ ಮತ್ತೊಂದು ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ 14 ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು ಆರು ದಿನಗಳ ಕಾಲ ಅವರ ಭಾಗದ ಚಿತ್ರೀಕರಣ ಮಾಡಿದ್ದೇವೆ. 20 ನಿಮಿಗಳ ಕಾಲ ಅವರು ತೆರೆಯ ಮೇಲೆ ಇರುತ್ತಾರೆ’ ಎಂದರು.

ಬಾಬು ಅವರ ಮಗ ಮತ್ತು ನಟ ಆದಿತ್ಯ, ಈ ಚಿತ್ರದ ನಿರ್ಮಾಪಕರು. ‘ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ನಮ್ಮ ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ’ ಎಂದರು ಆದಿತ್ಯ.

ಈ ಚಿತ್ರವನನ್ನು ರಾಜ್ಯಾದ್ಯಂತ ಮಾರ್ಸ್ ಸುರೇಶ್ ವಿತರಣೆ ಮಾಡುತ್ತಿದ್ದಾರೆ. ‘ನಾನು ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago