Nanna Magale superstar
ಕೆಲವು ವರ್ಷಗಳ ಹಿಂದೆ ‘ನನ್ ಮಗಳೇ ಹೀರೋಯಿನ್’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್, ‘ನನ್ನ ಮಗಳೇ ಸೂಪರ್ ಸ್ಟಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶೇಷಾದ್ರಿಪುರದ ಎ.ವಿ. ವರದಾಚಾರ್ ಕಲಾಕ್ಷೇತ್ರದಲ್ಲಿ ನೆರವೇರಿತು. ಸಾಹಿತಿ ಬಿ.ಆರ್.ಲಕ್ಷ್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್ ಹಾಗೂ ನಿರ್ದೇಶಕ ನಂಜುಂಡೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್.ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ನಿರ್ಮಿಸುತ್ತಿರುವ ಈ ಚಿತ್ರವನ್ನು ಆಯುರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.
ಅಪ್ಪ – ಅಮ್ಮನಿಗೆ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ, ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ತಂದೆ-ತಾಯಿ ತಮ್ಮ ಆಸೆಯನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಿದರೆ, ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥೆಯಂತೆ.
ಇದುವರೆಗೂ ಸಂಕಲನಕಾರರಾಗಿ ಕೆಲಸ ಮಾಡಿದ್ದ ಆಯುರ್‍ಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಆಯುರ್, ‘ಮಕ್ಕಳಿಗೆ ಅವರ ಆಸೆ ಪೂರೈಸುವುದಕ್ಕೆ ಬಿಡಿ ಎಂಬ ಸಂದೇಶ ಈ ಚಿತ್ರದಲ್ಲಿದೆ. ಈ ಚಿತ್ರದಲ್ಲಿ ರಿಯಾಲಿಟಿ ಶೋ ಕಥೆ ಕೂಡ ಇದೆ. ಬೆಂಗಳೂರಿನಲ್ಲೇ 30 ದಿನಗಳ ಚಿತ್ರೀಕರಣ ನಡೆಯಲಿದೆ. ನಮ್ಮ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರು ಹಾಡುಗಳನ್ನು ಬಿ.ಆರ್.ಲಕ್ಷ್ಮಣರಾವ್ ಅವರೆ ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ’ ಎಂದರು.
ಇದುವರೆಗೂ ವಿಲನ್ ಪಾತ್ರಗಳಲ್ಲೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಚೆಲುವರಾಜು, ಈ ಚಿತ್ರದಲ್ಲಿ ಇದುವರೆಗೂ ಮಾಡದ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರಂತೆ. ಅವರ ಪತ್ನಿಯಾಗಿ ಸಂಭ್ರಮಶ್ರೀ ನಟಿಸುತ್ತಿದ್ದು, ಮಗಳಾಗಿ ರೀತು ಸಿಂಗ್ ಅಭಿನಯಿಸುತ್ತಿದ್ದಾರೆ. ಪರಿಸರವಾದಿ ರೇವತಿ ಕಾಮತ್ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…