ಧನಂಜಯ್ ಅಭಿನಯದ ‘ಬಡವ ರಾಸ್ಕಲ್’ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಈಗ ಅದೇ ಧನಂಜಯ್ ಅಭಿನಯದಲ್ಲಿ ‘ಅಣ್ಣ ಫ್ರಮ್ ಮೆಕ್ಸಿಕೋ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಮಧ್ಯೆ, ಅವರು ನಿರ್ಮಾಪಕರಾಗಿದ್ದಾರೆ.
ಶಂಕರ್ ಗುರು, ಇದೀಗ ಧೀರಜ್ ಎಂ.ವಿ ಹಾಗೂ ವರುಣ್ ಗುರುರಾಜ್ ಜೊತೆಗೆ ಸೇರಿ ಸದ್ದಿಲ್ಲದೆ ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಎಂಬ ಚಿತ್ರ ನಿರ್ಮಿಸಿದ್ದಾರೆ. ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ಚಿತ್ರ ನಿರ್ಮಾಣವಾಗಿದೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.
‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಎಂಬ ಶೀರ್ಷಿಕೆಯೇ ಚಿತ್ರದ ಕಥೆ ಏನಿರಬಹುದು ಎಂಬ ಸೂಚನೆಯನ್ನು ಕೊಡುತ್ತದೆ. ಆದರೆ, ಚಿತ್ರತಂಡ ಚಿತ್ರದ ಬಗ್ಗೆ ಯಾವೊಂದು ಮಾಹಿತಿಯನ್ನೂ ಬಿಟ್ಟುಕೊಡುವುದಿಲ್ಲ. ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು ಎಂದಷ್ಟೇ ಹೇಳಿಕೊಂಡಿದೆ.
ಅಂದಹಾಗೆ, ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ. ಅರುಣ್ ಸೂರ್ಯ ಹಾಗೂ ‘ಡೊಳ್ಳು’, ‘ಶಾಖಾಹಾರಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ರಂಗ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಪ್ರಸಾದ್ ಹಾಗೂ ಸುನೀಲ್ ಕುಮಾರ್ ದೇಸಾಯಿ ಅವರ ಜೊತೆಗೆ ಕೆಲಸ ಕಲಿತಿರುವ ರಂಗ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮುಗಿದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮೊದಲ ಹಂತವಾಗಿ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಅಭಿನಂದನ್ ಕಶ್ಯಪ್ ಸಂಗೀತ ಹಾಗೂ ವೀರೇಶ್ ಛಾಯಾಗ್ರಹಣವಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…