ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್, ಅಲ್ಲು ಅರವಿಂದ್ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ ಮಗ ಸಹ ಹೀರೋ ಆಗುವುದಕ್ಕೆ ಹೊರಟಿದ್ದಾರೆ.
ಇತ್ತೀಚೆಗೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿದ್ದನ್ನು ನೆನೆಯಲು ಹೈದರಾಬಾದ್‍ನಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್, ಉಪೇಂದ್ರ ಮತ್ತು ‘ದುನಿಯಾ’ ವಿಜಯ್ ಭಾಗವಹಿಸಿ, ಬಾಲಕೃಷ್ಣ ಅವರಿಗೆ ಶುಭ ಕೋರಿದ್ದರು.
ಈಗ ಅವರ ಮಗ ಹೀರೋ ಆಗುತ್ತಿರುವ ಸುದ್ದಿ ಬಂದಿದೆ. ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್.ಎಲ್.ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ.
ಇತ್ತೀಚೆಗೆ ಮೋಕ್ಷಜ್ಞ ಅಭಿನಯದ ಪುರಾಣ ಹಿನ್ನೆಲೆಯ ಕಥೆ ಆಧರಿಸಿದ ಸಿನಿಮಾ ಘೋಷಣೆಯಾಗಿದೆ. ಚಿತ್ರದ ಫಸ್ಟ್ ಲುಕ್ ಸಹ ಬಿಡುಗಡೆ ಆಗಿದೆ. ಇತ್ತೀಚಿನ ‘ಹನುಮಾನ್’ ಸಿನಿಮಾ ಮೂಲಕ ಯಶಸ್ಸು ಪಡೆದ ನಿರ್ದೇಶಕ ಪ್ರಶಾಂತ್ ವರ್ಮಾ, ಮೋಕ್ಷಜ್ಞ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಇದೊಂದು ಚಿನ್ನದ ಗಣಿಯ ಕುರಿತಾಗಿದ್ದು, ಇತಿಹಾಸದಿಂದ ಸ್ಫೂರ್ತಿ ಪಡೆದಿದೆಯಂತೆ. ಮೋಕ್ಷಜ್ಞ ನಟನೆ, ನೃತ್ಯ ಮತ್ತು ಮಾರ್ಷಲ್ ಆರ್ಟ್ಸ್ನಲ್ಲಿ ತರಬೇತಿ ಪಡೆದಿದ್ದು, ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…