ಮನರಂಜನೆ

‘ಬಲರಾಮನ ದಿನಗಳು’ ಅಂತ್ಯ; ವಿನೋದ್ ಪ್ರಭಾಕರ್ ಹೊಸ ಚಿತ್ರದ ಚಿತ್ರೀಕರಣ ಪೂರ್ಣ

ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಇತ್ತೀಚೆಗೆ 25 ದಿನಗಳ ಪ್ರದರ್ಶನ ಕಂಡಿದೆ. ಈ ಮಧ್ಯೆ, ವಿನೋದ್‍ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ.

ಇದು ವಿನೋದ್‍ ಪ್ರಭಾಕರ್ ಅಭಿನಯದ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. ಇದೊಂದು 70-80ರ ಕಾಲಘಟ್ಟದ ಚಿತ್ರವಾಗಿದ್ದು, ಆಗಿನ ಕಾಲದ ಭೂಗತಲೋಕದ ಕಥೆಯಾಗಿದೆ. ವಿಶೇಷವೆಂದರೆ, ಕೆ.ಎಂ. ಚೈತನ್ಯ ಅವರ ಮೊದಲ ನಿರ್ದೇಶನದ ‘ಆ ದಿನಗಳು’ ಚಿತ್ರದಲ್ಲಿ ಅತುಲ್‍ ಕುಲಕರ್ಣಿ ಮತ್ತು ಆಶೀಶ್‍ ವಿದ್ಯಾರ್ಥಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ಸುಮಾರು 15 ವರ್ಷಗಳ ನಂತರ ಇಬ್ಬರೂ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಆ ದಿನಗಳು’ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶಿಸುತ್ತಿದ್ದಾರೆ. ವಿನೋದ್‍ಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ, ವಿನಯ್ ಗೌಡ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂತೋಷ್ ನಾರಾಯಣ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ವೇಣು ಛಾಯಾಗ್ರಹಣವಿದೆ.

ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

1 hour ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

2 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

3 hours ago