‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡಿಗೆ ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಮಾಡಿದೆ. ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆದ ಹಾಡುಗಳ ಪೈಕಿ 29ನೇ ಸ್ಥಾನ ಪಡೆದಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.
ಯುವ ರಾಜಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ‘ಬ್ಯಾಂಗಲ್ ಬಂಗಾರಿ …’ ಅಂತ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದ ಹಾಡಿಗೆ ಆಂತೋನಿ ದಾಸ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ.
‘ಎಕ್ಕ’ ಚಿತ್ರವನ್ನು ರೋಹಿತ್ ಪದಕಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಜೊತೆಯಾಗಿ ಸೇರಿ ನಿರ್ಮಿಸುತ್ತಿದ್ದಾರೆ. ಕನ್ನಡದ ಮೂರು ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಗಳು ಜೊತೆಯಾಗಿ ಚಿತ್ರ ನಿರ್ಮಿಸುತ್ತಿರುವುದು ವಿಶೇಷ.
‘ಎಕ್ಕ’ ಚಿತ್ರದಲ್ಲಿ ಯುವ ರಾಜಕುಮಾರ್ ಜೊತೆಗೆ ಸಂಪದ ಹುಲಿವಾನ, ಸಂಜನಾ ಆನಂದ್, ಶ್ರುತಿ, ಅತುಲ್ ಕುಲಕರ್ಣಿ, ಆದಿತ್ಯ, ಸಾಧು ಕೋಕಿಲ, ಪುನೀತ್ ರುದ್ರನಾಗ್, ಡಾ. ಸೂರಿ, ಹರಿಣಿ ಮುಂತಾದವರು ನಟಿಸಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.
‘ಎಕ್ಕ’ ಜುಲೈ 18ರಂದು ಬಿಡುಗಡೆಯಾಗಲಿದೆ.





