ಮನರಂಜನೆ

10 ಮಿಲಿಯನ್‍ ವೀಕ್ಷಣೆ ಕಂಡು ದಾಖಲೆ ಬರೆದ ‘ಬ್ಯಾಂಗಲ್ ಬಂಗಾರಿ …’

‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡಿಗೆ ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಮಾಡಿದೆ. ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆದ ಹಾಡುಗಳ ಪೈಕಿ 29ನೇ ಸ್ಥಾನ ಪಡೆದಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.

ಯುವ ರಾಜಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ‘ಬ್ಯಾಂಗಲ್ ಬಂಗಾರಿ …’ ಅಂತ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದ ಹಾಡಿಗೆ ಆಂತೋನಿ ದಾಸ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಮುರಳಿ ಮಾಸ್ಟರ್‍ ನೃತ್ಯ ಸಂಯೋಜಿಸಿದ್ದಾರೆ.

‘ಎಕ್ಕ’ ಚಿತ್ರವನ್ನು ರೋಹಿತ್ ಪದಕಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಜೊತೆಯಾಗಿ ಸೇರಿ ನಿರ್ಮಿಸುತ್ತಿದ್ದಾರೆ. ಕನ್ನಡದ ಮೂರು ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಗಳು ಜೊತೆಯಾಗಿ ಚಿತ್ರ ನಿರ್ಮಿಸುತ್ತಿರುವುದು ವಿಶೇಷ.

‘ಎಕ್ಕ’ ಚಿತ್ರದಲ್ಲಿ ಯುವ ರಾಜಕುಮಾರ್ ಜೊತೆಗೆ ಸಂಪದ ಹುಲಿವಾನ, ಸಂಜನಾ ಆನಂದ್, ಶ್ರುತಿ, ಅತುಲ್ ಕುಲಕರ್ಣಿ, ಆದಿತ್ಯ, ಸಾಧು ಕೋಕಿಲ, ಪುನೀತ್ ರುದ್ರನಾಗ್, ಡಾ. ಸೂರಿ, ಹರಿಣಿ ಮುಂತಾದವರು ನಟಿಸಿದ್ದಾರೆ. ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಎಕ್ಕ’ ಜುಲೈ 18ರಂದು ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago