ಮನರಂಜನೆ

ಚರ್ಚೆ ಮಾಡಿ, ಸಮಸ್ಯೆಗಳಿಗೆ ಕಾರಣಗಳನ್ನು ಹುಡುಕಿ: ಬರಗೂರು ರಾಮಚಂದ್ರಪ್ಪ ಸಲಹೆ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಚಿತ್ರರಂಗದವರೆಲ್ಲಾ ಒಟ್ಟಾಗಿ ಕುಳಿತು ಚರ್ಚೆ ಮಾಡಿ, ಸಮಸ್ಯೆಗಳಿಗೆ ಇರುವ ಕಾರಣಗಳನ್ನು ಹುಡುಗಿ ಎಂದು ಹಿರಿಯ ಸಾಹಿತಿ ಮತ್ತು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದ್ದಾರೆ.

ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ.

ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಹಿಂದೆ ಒಂದು ಚಿತ್ರ ಯಶಸ್ವಿಯಾಗಿ ನೂರು ದಿನಗಳ ಕಾಲ ಪ್ರದರ್ಶನವಾದಾಗ ಒಂದು ಸಂಭ್ರಮವಿತ್ತು. ಈಗ 10 ದಿನಗಳಿಗೆ ಸಂಭ್ರಮವನ್ನು ಆಚರಿಸಲಾಗುತ್ತದೆ. ಆಗ ಒಂದು ಚಿತ್ರ 25-30 ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿತ್ತು. ಈಗ ಏಕಕಾಲಕ್ಕೆ ನೂರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತವೆ. ಕೆಲವು ಚಿತ್ರಗಳನ್ನು ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೇಳಿದ್ದೇನೆ. ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಮೂರ್ನಾಲ್ಕು ದಿನಗಳಲ್ಲಿ ಹಾಕಿದ ಬಂಡವಾಳ ವಾಪಸ್ಸು ಪಡೆಯುತ್ತವೆ ಎಂದು ಹೇಳಲಾಗುತ್ತದೆ. ಹಾಗಾಗಿ, 10 ದಿನಕ್ಕೆ ಸಂಭ್ರಮಾಚರಣೆ ಶುರುವಾಗಿದೆ’ ಎನ್ನುತ್ತಾರೆ.

10 ದಿನಕ್ಕೆ ಸಂಭ್ರಮ ಪಡುತ್ತೇವೆ ಎಂದರೆ, ನಮಗೆ ಹಿನ್ನಡೆಯಾಗುತ್ತಿದೆ ಎಂದರ್ಥ ಎನ್ನುವ ಬರಗೂರು, ‘ಈ ಕುರಿತು ನಾವು ಚರ್ಚೆ ಮಾಡುತ್ತಿಲ್ಲ. ಸಂಬಂಧಪಟ್ಟವರು ಕೂತು, ಯಾಕೆ ಹೀಗಾಗುತ್ತಿದೆ ಎಂದು ಚರ್ಚಿಸಬೇಕು. ಕಾರಣಗಳನ್ನು ಹುಡುಕಬೇಕು. ಒಬ್ಬೊಬ್ಬರಿಗೆ ಒಂದೊಂದು ಅಭಿಪ್ರಾಯಗಳಿರುತ್ತವೆ. ಕನ್ನಡ ಚಿತ್ರರಂಗದಲ್ಲಿ ಹಲವು ಸಂಘ-ಸಂಸ್ಥೆಗಳು ಸಕ್ರಿಯವಾಗಿವೆ. ಆ ಸಂಘ-ಸಂಸ್ಥೆಗಳು ಕೂತು ಚರ್ಚಿಸಬೇಕು. ಇದರಲ್ಲಿ ಸರ್ಕಾರವೂ ತೊಡಗಿಸಿಕೊಳ್ಳಬೇಕು. ಅಂತಹ ಚರ್ಚೆಯಿಂದ ಮಾತ್ರ ನಾವು ಎಲ್ಲಿ ಎಡವುತ್ತಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಸಾಧ್ಯ’ ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago