ಮನರಂಜನೆ

BBK12 | ಬಿಗ್‌ಬಾಸ್‌ ಗೆದ್ದು ಬೀಗಿದ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌

ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಯಾರು ವಿನ್ನರ್‌ ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 37 ಕೋಟಿ ವೋಟ್ ಪಡೆದು ಗಿಲ್ಲಿ ನಟ ಅವರು ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕ ಜನರ ಫೇವರಿಟ್ ಎನಿಸಿಕೊಂಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದಾರೆ.

ಈ ಬಾರಿ ಟಾಪ್‌ 5 ಸ್ಥಾನದಲ್ಲಿ ಕಾವ್ಯ, ರಘು, ಅಶ್ವಿನಿಗೌಡ, ಗಿಲ್ಲಿ ನಟ ಹಾಗೂ ರಕ್ಷಿತಾ ಇದ್ದರು. ಈ ಟಾಪ್‌ ಫೈನಲ್‌ ಲಿಸ್ಟ್‌ಗಳ ಪೈಕಿ ಗಿಲ್ಲಿ ನಟ ಬಿಗ್‌ಬಾಸ್‌ ಸೀಸನ್‌ 12ರ ವಿನ್ನರ್‌ ಆಗಿದ್ದಾರೆ. ಅಂತಿಮವಾಗಿ ಗಿಲಗಲಿ ನಟ ಮತ್ತು ರಕ್ಷಿತಾ ಶೆಟ್ಟಿ ಇಬ್ಬರ ಮಧ್ಯೆ ಪೈಪೋಟಿ ಜೋರಾಗಿತ್ತು. ಕೊನೆಗೂ ಗಿಲ್ಲಿ ನಟ ಬಿಗ್‌ಬಾಸ್‌ ಗೆದ್ದು ಬೀಗಿದ್ದಾರೆ. ಗಿಲ್ಲಿ ಅವರು ಟ್ರೋಪಿಯೊಂದಿಗೆ 50ಲಕ್ಷ ಹಾಗೂ ಮಾರುತಿ ಸುಜುಕಿ ಎಸ್‌ಯುವಿ ವಿಕ್ಟೋರಿಯಸ್‌ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಂಡ್ಯದ ರೈತಾಪಿ ಕುಟುಂಬದಿಂದ ಬಂದ ಗಿಲ್ಲಿ ನಟ ಅವರು ನಿರ್ದೇಶಕರಾಗುವ ಕನಸಿನೊಂದಿಗೆ ಬೆಂಗಳೂರಿಗೆ ಬಂದರು, ಆದರೆ ಹಾಸ್ಯದಿಂದಲೇ ಜನಪ್ರಿಯತೆ ಪಡೆದರು. ಯೂಟ್ಯೂಬ್‌ನಲ್ಲಿ ತಮ್ಮ ಹಾಸ್ಯ ವಿಡಿಯೋಗಳಿಂದ ಮಿಲಿಯನ್‌ಗಟ್ಟಲೆ ವೀಕ್ಷಕರನ್ನು ಪಡೆದರು. ಕಾಮಿಡಿ ಕಿಲಾಡಿಗಳು ಸೀಸನ್ 4, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಭರ್ಜರಿ ಬ್ಯಾಚುಲರ್ಸ್, ಮತ್ತು ಕ್ವಾಟ್ಲೆ ಕಿಚನ್ ನಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಇದೀಗ ಕೊನೆಯದಾಗಿ ಬಿಗ್‌ಬಾಸ್‌ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಹ್ಲಿ ಹೋರಾಟ ವ್ಯರ್ಥ : ಏಕದಿನ ಸರಣಿ ಸೋತ ಇಂಡಿಯಾ

ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ…

3 hours ago

ಬಹುರೂಪಿಗೆ ವರ್ಣರಂಜಿತ ತೆರೆ

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ…

3 hours ago

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಜಾ.ದಳ ಸಜ್ಜು

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…

3 hours ago

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿ ಹೋರಾಟಕ್ಕೆ ಸಜ್ಜಾಗಿ : ಮೈಸೂರಲ್ಲಿ ಸಿಎಂ ಕರೆ

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…

5 hours ago

ಮಂಡ್ಯ | ಜಿಲ್ಲೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತರಲು ಪ್ರಯತ್ನ ; ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ…

5 hours ago

ಮೌನಿ ಅಮಾವಾಸ್ಯೆ : ಮ.ಬೆಟ್ಟದಲ್ಲಿ ಜನಸಾಗರ, ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ…

5 hours ago