ಹಾವೇರಿ: ದರ್ಶನ್ ಆಪ್ತೆಗೆ ಮರ್ಮಾಂಗದ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ನವರು ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಪವಿತ್ರಾ ಗೌಡ, ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.
ಇತ್ತ ಕನ್ನಡ ಚಿತ್ರರಂಗ ಸೇರಿದಂತೆ ಹಲವಾರು ಜನರು ಈ ಕೃತ್ಯವನ್ನು ಖಂಡಿಸಿದ್ದಾರೆ. ಅದರಲ್ಲೂ ಕನ್ನಡದ ಹಿರಿಯ ನಟ, ರಾಜಕಾರಣಿ ಬಿ.ಸಿ ಪಾಟೀಲ್ ಈ ಹತ್ಯೆಯ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ಪ್ರಕರಣ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಿ.ಸಿ ಪಾಟೀಲ್ ಅವರು ಖಾರವಾಗಿ ಉತ್ತರಿಸಿದರು. ರೇಣುಕಾಸ್ವಾಮಿ ಕೃತ್ಯ ನಡೆದಿರುವುದು ಹೇಯ ಕೃತ್ಯ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಕೇಸ್‌ನಲ್ಲಿ ಯಾರೇ ತಪ್ಪಿತಸ್ಥರಿದ್ದರು ಸಹಾ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೇ ಆಗಿದ್ದರು ಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಬಿ.ಸಿ ಪಾಟೀಲ್ ಕಿಡಿಕಾರಿದರು.
ಈ ಪ್ರಕರಣದಲ್ಲಿ ನಿಷ್ಪಕ್ಷಪಾತ, ನ್ಯಾಯಯುತವಾದ ತನಿಖೆ ಆಗಬೇಕು. ದರ್ಶನ್ ಈಗ ಆರೋಪಿಯಾಗಿದ್ದಾರೆ. ಅಪರಾಧ ಸಾಭೀತಾದ ಬಳಿಕ ಚಿತ್ರರಂಗದಿಂದ ಬ್ಯಾನ್ ಮಾಡಬೇಕೋ ಇಲ್ಲವೋ ಎಂಬುದನ್ನು ತೀರ್ಮಾನಿಸುತ್ತಾರೆ. ದರ್ಶನ್ ಅವರನ್ನು ಬ್ಯಾನ್ ಮಾಡಲು ಆಗಲ್ಲ ಎಂದು ಈಗಾಗಲೇ ಚಿತ್ರಮಂಡಳಿ ಹೇಳಿದ್ದು, ಅಪರಾಧ ಸಾಭೀತಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇನ್ನು ನಟ ದರ್ಶನ್ ಬಗ್ಗೆ ಮಾತನಾಡಿರುವ ಅವರು, ದರ್ಶನ್ ನನಗೆ ಕಲಾವಿದನಾಗಿ, ಚಿತ್ರರಂಗದ ಸ್ನೇಹಿತನಾಗಿ ಮಾತ್ರ ಗೊತ್ತು. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಕೃಷಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ಕೃಷಿ ಇಲಾಖೆ ಪ್ರಚಾರ ರಾಯಭಾರಿಯನ್ನಾಗಿ ಮಾಡಿದ್ದೆ. ಇದರ ಉದ್ದೇಶ ರೈತರಿಗೆ ಶಕ್ತಿ ತುಂಬುವುದಾಗಿತ್ತು. ನಾವು ರಾಯಭಾರಿಯನ್ನಾಗಿ ನೇಮಕ ಮಾಡಿದ್ದ ಸಮಯದಲ್ಲಿ ದರ್ಶನ್ ಈ ರೀತಿಯ ಕೃತ್ಯ ಎಸಗಿರಲಿಲ್ಲ ಎಂದರು.
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…