ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು: ಬಿ.ಸಿ ಪಾಟೀಲ್‌

ಹಾವೇರಿ: ದರ್ಶನ್‌ ಆಪ್ತೆಗೆ ಮರ್ಮಾಂಗದ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನವರು ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಪವಿತ್ರಾ ಗೌಡ, ದರ್ಶನ್‌ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.

ಇತ್ತ ಕನ್ನಡ ಚಿತ್ರರಂಗ ಸೇರಿದಂತೆ ಹಲವಾರು ಜನರು ಈ ಕೃತ್ಯವನ್ನು ಖಂಡಿಸಿದ್ದಾರೆ. ಅದರಲ್ಲೂ ಕನ್ನಡದ ಹಿರಿಯ ನಟ, ರಾಜಕಾರಣಿ ಬಿ.ಸಿ ಪಾಟೀಲ್‌ ಈ ಹತ್ಯೆಯ ಬಗ್ಗೆ ಮಾತನಾಡಿದ್ದಾರೆ.

ದರ್ಶನ್‌ ಪ್ರಕರಣ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಿ.ಸಿ ಪಾಟೀಲ್‌ ಅವರು ಖಾರವಾಗಿ ಉತ್ತರಿಸಿದರು. ರೇಣುಕಾಸ್ವಾಮಿ ಕೃತ್ಯ ನಡೆದಿರುವುದು ಹೇಯ ಕೃತ್ಯ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಕೇಸ್‌ನಲ್ಲಿ ಯಾರೇ ತಪ್ಪಿತಸ್ಥರಿದ್ದರು ಸಹಾ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೇ ಆಗಿದ್ದರು ಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಬಿ.ಸಿ ಪಾಟೀಲ್‌ ಕಿಡಿಕಾರಿದರು.

ಈ ಪ್ರಕರಣದಲ್ಲಿ ನಿಷ್ಪಕ್ಷಪಾತ, ನ್ಯಾಯಯುತವಾದ ತನಿಖೆ ಆಗಬೇಕು. ದರ್ಶನ್‌ ಈಗ ಆರೋಪಿಯಾಗಿದ್ದಾರೆ. ಅಪರಾಧ ಸಾಭೀತಾದ ಬಳಿಕ ಚಿತ್ರರಂಗದಿಂದ ಬ್ಯಾನ್‌ ಮಾಡಬೇಕೋ ಇಲ್ಲವೋ ಎಂಬುದನ್ನು ತೀರ್ಮಾನಿಸುತ್ತಾರೆ. ದರ್ಶನ್‌ ಅವರನ್ನು ಬ್ಯಾನ್‌ ಮಾಡಲು ಆಗಲ್ಲ ಎಂದು ಈಗಾಗಲೇ ಚಿತ್ರಮಂಡಳಿ ಹೇಳಿದ್ದು, ಅಪರಾಧ ಸಾಭೀತಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಇನ್ನು ನಟ ದರ್ಶನ್‌ ಬಗ್ಗೆ ಮಾತನಾಡಿರುವ ಅವರು, ದರ್ಶನ್‌ ನನಗೆ ಕಲಾವಿದನಾಗಿ, ಚಿತ್ರರಂಗದ ಸ್ನೇಹಿತನಾಗಿ ಮಾತ್ರ ಗೊತ್ತು. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಕೃಷಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ಕೃಷಿ ಇಲಾಖೆ ಪ್ರಚಾರ ರಾಯಭಾರಿಯನ್ನಾಗಿ ಮಾಡಿದ್ದೆ. ಇದರ ಉದ್ದೇಶ ರೈತರಿಗೆ ಶಕ್ತಿ ತುಂಬುವುದಾಗಿತ್ತು. ನಾವು ರಾಯಭಾರಿಯನ್ನಾಗಿ ನೇಮಕ ಮಾಡಿದ್ದ ಸಮಯದಲ್ಲಿ ದರ್ಶನ್‌ ಈ ರೀತಿಯ ಕೃತ್ಯ ಎಸಗಿರಲಿಲ್ಲ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

5 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

7 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

7 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

7 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

9 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

10 hours ago