Sreeleela
ಶ್ರೀಲೀಲಾ, ಕಾರ್ತಿಕ್ ಆರ್ಯನ್ ಅಭಿನಯದ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು ಕೇಳಿ ಬಂದಿದೆ. ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು ಹೇಳಲಾಗಿದೆ.
ಈ ಹಿಂದೆ ತೆಲುಗಿನಲ್ಲಿ ‘ಡ್ರೀಮ್ ಗರ್ಲ್’ ಎಂಬ ಚಿತ್ರ ನಿರ್ದೇಶನ ಮಾಡಿದ್ದ ರಾಜ್ ಶಾಂಡಿಲ್ಯ, ಇದೀಗ ಸಿದ್ಧಾರ್ಥ್ ಮಲ್ಹೋತ್ರಾ ಅವರನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇದ್ದು, ಒಬ್ಬ ನಾಯಕಿಯ ಪಾತ್ರಕ್ಕೆ ಶ್ರೀಲೀಲಾ ಅವರನ್ನು ಕೇಳಲಾಗಿದೆಯಂತೆ. ಇನ್ನೊಂದು ಪಾತ್ರಕ್ಕೆ ಅನನ್ಯ ಪಾಂಡೆ ಅವರನ್ನು ಸಂಪರ್ಕಿಸಲಾಗಿದೆಯಂತೆ. ಈ ಚಿತ್ರ ಯಾವಾಗ ಶುರುವಾಗುತ್ತದೆ, ಯಾರೆಲ್ಲಾ ಇರುತ್ತಾರೆ ಎಂಬುದರ ಕುರಿತು ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.
ಶ್ರೀಲೀಲಾ ಅಭಿನಯದ ಯಾವೊಂದು ತೆಲುಗು ಚಿತ್ರವೂ ದೊಡ್ಡ ಯಶಸ್ಸು ಕಾಣದಿದ್ದರೂ, ಆಕೆಯ ಬೇಡಿಕೆ ಸ್ವಲ್ಪವೂ ಕಡಿಮೆಯಾಗಿಲ್ಲ. ಅದಕ್ಕೆ ಕಾರಣ, ‘ಪುಷ್ಪ 2’ ಚಿತ್ರದ ಐಟಂ ಸಾಂಗ್. ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್’ ಎಂಬ ಐಟಂ ಹಾಡಿಗೆ ಶ್ರೀಲೀಲಾ ಹೆಜ್ಜೆ ಹಾಕಿದ್ದು, ಈ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.
ಇತ್ತೀಚೆಗೆ ನಿತಿನ್ ಮತ್ತು ಶ್ರೀಲೀಲಾ ಅಭಿನಯದ ‘ರಾಬಿನ್‍ಹುಡ್’ ಚಿತ್ರ ಬಿಡುಗಡೆಯಾಯಿತು. ಈ ಚಿತ್ರ ಬಂದಿದ್ದೂ ಗೊತ್ತಾಗಲಿಲ್ಲ, ಹೋಗಿದ್ದೂ ಗೊತ್ತಾಗಲಿಲ್ಲ. ಆ ಮಟ್ಟಿಗೆ ಫ್ಲಾಪ್ ಎಂದನಿಸಿಕೊಂಡಿತು. ಹೀಗಿರುವಾಗಲೇ, ರವಿತೇಜ ಅಭಿನಯದ ‘ಮಾಸ್ ಜಾತ್ರ’ ಎಂಬ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಶ್ರೀಲೀಲಾ, ತಮಿಳಿನಲ್ಲಿ ಶಿವಕಾರ್ತಿಕೇಯನ್ ಅಭಿನಯದ ‘ಪರಾಶಕ್ತಿ’ ಎಂಬ ಚಿತ್ರದಲ್ಲೂ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.
ಇನ್ನು, ಶ್ರೀಲೀಲಾ ನಟಿಸುತ್ತಿರುವ ಏಕೈಕ ಚಿತ್ರ ಎಂದರೆ ಅದು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ ಅಭಿನಯದ ‘ಜ್ಯೂನಿಯರ್’ ಮಾತ್ರ. ಆ ಚಿತ್ರವು ಕನ್ನಡವಷ್ಟೇ ಅಲ್ಲದೆ, ತೆಲುಗಿನಲ್ಲೂ ತಯಾರಾಗುತ್ತಿದೆ. ಈ ಚಿತ್ರ ಭರ್ಜರಿಯಾಗಿ ಪ್ರಾರಂಭವಾದರೈ, ಕೆಲವು ತಿಂಗಳುಗಳಿಂದ ಯಾವುದೇ ಸುದ್ದಿ ಇಲ್ಲ. ಚಿತ್ರ ನಿಂತಿದೆಯೋ, ಮುಂದುವರೆಯುತ್ತದೋ ಎಂಬುದರ ಕುರಿತು ಸಹ ಸೂಕ್ತ ಮಾಹಿತಿ ಇಲ್ಲ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…