ಬೆಂಗಳೂರು: ನಿನ್ನೆ ( ಮೇ 21 ) ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಆರ್ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಇನ್ನು ಈ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಹಲವು ಕಲಾವಿದರು ಹಾಗೂ ಮಾಡೆಲ್‌ಗಳು ಭಾಗಿಯಾಗಿದ್ದರು ಎಂದು ಸುದ್ದಿಯಾಗಿತ್ತು. ಹೀಗೆ ಈ ಸುದ್ದಿಯಲ್ಲಿ ತನ್ನ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಹೇಮಾ ತಾನು ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿಲ್ಲ ಮತ್ತು ತಾನು ಹೈದರಾಬಾದ್‌ನ ಫಾರ್ಮ್‌ಹೌಸ್‌ನಲ್ಲಿ ಇರುವುದಾಗಿ ಹೇಳಿಕೊಂಡಿದ್ದರು.
ಆದರೆ ಇದೀಗ ಬೆಂಗಳೂರು ಪೊಲೀಸರು ಹಂಚಿಕೊಂಡಿರುವ ಪಾರ್ಟಿಯ ವಿಡಿಯೊದಲ್ಲಿ ನಟಿ ಹೇಮಾ ಇರುವುದು ಖಚಿತವಾಗಿದೆ. ಈ ವಿಚಾರವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದು, ನಟಿಯ ಅಸಲಿ ಮುಖ ಬಯಲಾಗಿದೆ.
ʼಸನ್ ಸೆಟ್ ಟು ಸನ್ ರೈಸ್ ವಿಕ್ಟರಿʼ ಎಂಬ ಹೆಸರಿನ ಅಡಿಯಲ್ಲಿ ಆಯೋಜನೆಯಾಗಿದ್ದ ಈ ಪಾರ್ಟಿಯನ್ನು ಸಂಜೆಯಿಂದ ಬೆಳಗ್ಗೆವರೆಗೆ ನಡೆಸಲು ಯೋಜನೆ ರೂಪಿಸಲಾಗಿತ್ತು. ಈ ಪಾರ್ಟಿಯಲ್ಲಿ ಕೊಕೈನ್, ಎಂಡಿಎಂಎ ಪಿಲ್ಸ್ ಸೇರಿದಂತೆ ಹಲವಾರು ಮಾದಕ ವಸ್ತುಗಳ ಮಾರಾಟ ನಡೆದಿತ್ತು ಎನ್ನಲಾಗಿದೆ. ಹೇಮಾ ಹಂಚಿಕೊಂಡ ವಿಡಿಯೊ ಬಗ್ಗೆ ಮಾತನಾಡಿದ ದಯಾನಂದ್ ʼಹೇಮಾ ಪಾರ್ಟಿಯಲ್ಲಿ ಭಾಗಿಯಾಗಿದ್ದು ಸತ್ಯʼ ಎಂದಿದ್ದಾರೆ. ಅಲ್ಲದೇ ʼಯಾವ ಸಂದರ್ಭದಲ್ಲಿ ವಿಡಿಯೊ ಮಾಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆʼ ಎಂದು ಹೇಳಿಕೆ ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…