Mysore
29
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಅಕ್ಟೋಬರ್ ಮೂರರಂದು ‘ಭೈರಾದೇವಿ’ ಬಿಡುಗಡೆ

ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ ಪ್ರಾರಂಭವಾಗಿದೆ.

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗಿಯೂ ನಟಿಸಿರುವ ‘ಭೈರಾದೃವಿ’ ಚಿತ್ರ ಅಕ್ಟೋಬರ್ 3 ರಂದು ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ‘ಭೈರಾದೇವಿ’ ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಧಿಕಾ ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು. ‘ಭೈರಾದೇವಿ’ ಚಿತ್ರದ ಪೋಸ್ಟರ್ ವುಳ್ಳ ಟ್ಯಾಬ್ಲೊ ಹಾಗೂ ಆಟೋಗಳು ರಾಜ್ಯಾದ್ಯಂತ ಸಂಚರಿಸಲಿದೆ.

‘ಭೈರಾದೇವಿ’ ಚಿತ್ರವು ಐದು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ತಡವಾಗಿ ಇದೀಗ ಬಿಡುಗಡೆ ಆಗುತ್ತಿದೆ. ಈ ಹಿಂದೆ ‘ಆರ್‍ಎಕ್ಸ್ ಸೂರಿ’ ನಿರ್ದೇಶಿಸದ್ದ ಶ್ರೀಜೈ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತವಿದೆ.

‘ಭೈರಾದೇವಿ’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

Tags:
error: Content is protected !!