ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ ಪ್ರಾರಂಭವಾಗಿದೆ.
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗಿಯೂ ನಟಿಸಿರುವ ‘ಭೈರಾದೃವಿ’ ಚಿತ್ರ ಅಕ್ಟೋಬರ್ 3 ರಂದು ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.
ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ‘ಭೈರಾದೇವಿ’ ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಧಿಕಾ ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು. ‘ಭೈರಾದೇವಿ’ ಚಿತ್ರದ ಪೋಸ್ಟರ್ ವುಳ್ಳ ಟ್ಯಾಬ್ಲೊ ಹಾಗೂ ಆಟೋಗಳು ರಾಜ್ಯಾದ್ಯಂತ ಸಂಚರಿಸಲಿದೆ.
‘ಭೈರಾದೇವಿ’ ಚಿತ್ರವು ಐದು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ತಡವಾಗಿ ಇದೀಗ ಬಿಡುಗಡೆ ಆಗುತ್ತಿದೆ. ಈ ಹಿಂದೆ ‘ಆರ್‍ಎಕ್ಸ್ ಸೂರಿ’ ನಿರ್ದೇಶಿಸದ್ದ ಶ್ರೀಜೈ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತವಿದೆ.
‘ಭೈರಾದೇವಿ’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…