ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.
ಹೌದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ ಆಗಿದೆ.
‘ಕೆಜಿಎಫ್’ ಖ್ಯಾತಿಯ ಕಿನ್ನಾಳ್ ರಾಜ್ ಬರೆದಿರುವ ‘ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು…’ ಎಂದು ಸಾಗುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆಗೆ ರವಿ ಬಸ್ರೂರು ಸಂಗೀತ ಸಂಯೋಜಿಸಿದರೆ, ಸಂತೋಷ್ ವೆಂಕಿ ಹಾಡಿದ್ದಾರೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್‍ನಲ್ಲಿ ಮೂಡಿಬಂದಿದ್ದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.
‘ಭೈರತಿ ರಣಗಲ್’ ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಮಿಕ್ಕಂತೆ ಬಾಬು ಹಿರಣ್ಣಯ್ಯ, ರಾಹುಲ್ ಬೋಸ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನವಿದೆ.
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…