ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12ಕ್ಕೆ ಆರಂಭದಲ್ಲೇ ಹಲವು ಸಂಕಷ್ಟ ಎದುರಾಗಿದ್ದು, ಕೆಲವೇ ದಿನಗಳಲ್ಲಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್ ನೀಡಿತ್ತು. ಆದರೆ ಇದೀಗ ಬಿಗ್‌ಬಾಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ನೋಟಿಸ್ ನೀಡಲಾಗಿದೆ. ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋವನ್ನು ರಾಮನಗರದ ಬಿಡದಿ ಬಳಿ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಹಾಕಿ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಪೊಲೀಸರಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಇದನ್ನು ಓದಿ : ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್: ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ
ಅನಧಿಕೃತವಾಗಿ ಇಲ್ಲಿ ಶೋ ನಡೆಸಲಾಗುತ್ತಿದ್ದು, ಈ ಹಿಂದೆ ವಿದ್ಯುತ್ ಕಡಿತಕ್ಕೂ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಇದೀಗ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಮತ್ತೊಂದು ನೋಟಿಸ್ ನೀಡಲಾಗಿದೆ. ಪರಿಣಾಮ ಬಿಗ್‌ಬಾಸ್ ಶೋಗೆ ಮತ್ತೊಂದು ಸಮಸ್ಯೆ ಎದುರಾಗಿದೆ.
ತ್ಯಾಜ್ಯ ನೀರು ಸಂಸ್ಕಾರಣಾ ಘಟಕವನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಹೌಸ್ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು.
ಮನೆಯಲ್ಲಿ ಪ್ರತಿ ದಿನ ಸುಮಾರು 2.5 ಲಕ್ಷ ಲೀಟರ್ ನೀರನ್ನು ಬಳಕೆ ಮಾಡಲಾಗುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಸೀಸನ್ 12 ಬಂದ್ ಆಗುತ್ತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.





