ಮನರಂಜನೆ

ಬಿಗ್‌ ಬಾಸ್‌ಗೆ ಶಾಕ್‌ ಮೇಲೆ ಶಾಕ್:‌ ಬಂದ್‌ ಆಗುತ್ತಾ ಬಿಗ್‌ ಬಾಸ್‌ ಸೀಸನ್‌-12?

ಬೆಂಗಳೂರು: ಕನ್ನಡದ ಬಿಗ್‌ ಬಾಸ್‌ ಸೀಸನ್‌-12ಕ್ಕೆ ಆರಂಭದಲ್ಲೇ ಹಲವು ಸಂಕಷ್ಟ ಎದುರಾಗಿದ್ದು, ಕೆಲವೇ ದಿನಗಳಲ್ಲಿ ಶೋ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್‌ ನೀಡಿತ್ತು. ಆದರೆ ಇದೀಗ ಬಿಗ್‌ಬಾಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕನ್ನಡ ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆಸಲು ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ನೋಟಿಸ್‌ ನೀಡಲಾಗಿದೆ. ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋವನ್ನು ರಾಮನಗರದ ಬಿಡದಿ ಬಳಿ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್‌ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್‌ ಹಾಕಿ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಪೊಲೀಸರಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿ : ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

ಅನಧಿಕೃತವಾಗಿ ಇಲ್ಲಿ ಶೋ ನಡೆಸಲಾಗುತ್ತಿದ್ದು, ಈ ಹಿಂದೆ ವಿದ್ಯುತ್ ಕಡಿತಕ್ಕೂ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಇದೀಗ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಮತ್ತೊಂದು ನೋಟಿಸ್‌ ನೀಡಲಾಗಿದೆ. ಪರಿಣಾಮ ಬಿಗ್‌ಬಾಸ್‌ ಶೋಗೆ ಮತ್ತೊಂದು ಸಮಸ್ಯೆ ಎದುರಾಗಿದೆ.

ತ್ಯಾಜ್ಯ ನೀರು ಸಂಸ್ಕಾರಣಾ ಘಟಕವನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಬಿಗ್‌ಬಾಸ್‌ ಹೌಸ್‌ ಬಂದ್‌ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿತ್ತು.

ಮನೆಯಲ್ಲಿ ಪ್ರತಿ ದಿನ ಸುಮಾರು 2.5 ಲಕ್ಷ ಲೀಟರ್‌ ನೀರನ್ನು ಬಳಕೆ ಮಾಡಲಾಗುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಗ್‌ಬಾಸ್‌ ಸೀಸನ್‌ 12 ಬಂದ್‌ ಆಗುತ್ತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

17 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

18 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

19 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

22 hours ago