ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11ಕ್ಕೆ ದಿನಗಣನೆ ಶುರುವಾಗಿದೆ.
ಅಂತೂ ಇಂತೂ ಪ್ರೇಕ್ಷಕರ ಕುತೂಹಲಕ್ಕೆ ತೆರೆಬಿದ್ದಿದ್ದು, ನಟ ಕಿಚ್ಚ ಸುದೀಪ್ ಅವರು ಮಾಸ್ ಡೈಲಾಗೆ ಹೊಡೆದ ಬಿಗ್‌ಬಾಸ್ ಪ್ರೋಮೋವೊಂದು ರಿಲೀಸ್ ಆಗಿದೆ.
ಬಿಗ್ ಬಾಸ್ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, 10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೆ ಲೆಕ್ಕ. ಇದು ಹೊಸ ಅಧ್ಯಾಯ ಎಂದು ಸುದೀಪ್ ಸಖತ್ ಡೈಲಾಗ್ ಹೊಡೆದಿದ್ದಾರೆ.
ಈ ಮೂಲಕ ಈ ಬಾರಿಯ ಬಿಗ್‌ಬಾಸ್ ಶೋನಲ್ಲಿ ಯಾರು ನಿರೂಪಣೆ ಮಾಡುತ್ತಾರೆ ಎಂದು ಕುತೂಹಲದಿಂದ ಕಾಯುತ್ತಿದ್ದ ಪ್ರೇಕ್ಷಕರಿಗೆ ಸಂತಸವಾಗಿದ್ದು, ಕಿಚ್ಚ ಸುದೀಪ್ ಅವರೇ ಈ ಬಾರಿಯೂ ನಿರೂಪಣೆ ಮಾಡಲಿದ್ದಾರೆ.
ಸೆಪ್ಟೆಂಬರ್.29ರಿಂದ ಬಿಗ್‌ಬಾಸ್ ಶುರುವಾಗಲಿದ್ದು, ಈ ಬಾರಿ ಯಾರು ಬಿಗ್‌ಬಾಸ್ ಮನೆಗೆ ಎಂಟ್ರಿಕೊಡಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿದೆ.