ಮನರಂಜನೆ

ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ನೀಲಿನಕ್ಷೆ ಅನಾವರಣ …

ಡಾ. ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ.

ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಹೇಳಿದ್ದರು. ಅದರಂತೆ, ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಅವರು ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು

ಸುದೀಪ್‌, ಉದ್ಯಮಿ ಅಶೋಕ್‌ ಖೇಣಿ ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಅವರು ಜೊತೆಗೂಡಿ ಈ ಅಭಿಮಾನಿ ಕ್ಷೇತ್ರಕ್ಕೆ ಅಗತ್ಯವಿರುವ ಜಾಗವನ್ನು ಖರೀದಿ ಮಾಡಿದ್ದಾರೆ. ಈ ಜಾಗದಲ್ಲಿ ಡಾ. ವಿಷ್ಣು ಅವರ 25 ಅಡಿಯ ಪ್ರತಿಮೆ, ಧ್ಯಾನ ಮಂದಿರ, ಪುಸ್ತಕ ಭಂಡಾರ, ಫೋಟೋ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಸ್ಮಾರಕವನ್ನು ಜ್ಞಾನ, ಧ್ಯಾನ ಮತ್ತು ದರ್ಶನ ಎಂಬ ಪರಿಕಲ್ಪನೆಯಡಿ ನಿರ್ಮಾಣ ಮಾಡಲಾಗುತ್ತಿದೆ.

ವಿಶೇಷವೆಂದರೆ, ಇಲ್ಲಿ ಧ್ಯಾನ ಮಂದಿರದಲ್ಲಿ ವಿಷ್ಣುವರ್ಧನ್‍ ಅವರು ಧ್ಯಾನಸ್ಥ ಭಂಗಿಯಲ್ಲಿರುವ ಪ್ರತಿಮೆ ಇರಲಿದ್ದು, ಮಧ್ಯಾಹ್ನ ಎರಡು ಗಂಟೆ ಸಮಯಕ್ಕೆ ಸೂರ್ಯನ ಕಿರಣಗಳು ವಿಷ್ಣು ಅವರ ಅಮೃತ ಶಿಲೆಯ ಪ್ರತಿಮೆಯ ಮೇಲೆ ಬೀಳುವಂತೆ ಧ್ಯಾನ ಮಂದಿರವನ್ನು ವಿನ್ಯಾಸ ಮಾಡಲಾಗುತ್ತದೆ. ಹಾಗೆಯೇ, ಪ್ರತಿ ಸಂಜೆ 6.30ಕ್ಕೆ ಲೇಸರ್‌ ಶೋ ನಡೆಯುವಂತೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ನೀಲಿ ನಕ್ಷೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್‌, ‘ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಈಗ ಜಾಗದ ಕುರಿತು ಯಾವುದೇ ಮಾಹಿತಿ ನೀಡಲಾಗದು. ಏಕೆಂದರೆ, ಆ ಜಾಗದ ಮಾಹಿತಿ ಸಿಕ್ಕಿದ ತಕ್ಷಣ ವಿಷ್ಣುವರ್ಧನ್‌ ಅವರ ವಿಷಯದಲ್ಲಿ ವಿವಾದಗಳು ಇದ್ದೇ ಇರುತ್ತವೆ ಎಂಬ ಕಾರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಆ ಜಾಗವನ್ನು ಈಗ ಬಹಿರಂಗಪಡಿಸಲಾಗುವುದಿಲ್ಲ. ಇದರ ಖರ್ಚು ವೆಚ್ಚಗಳು ಹಾಗೂ ಹಣಕಾಸು ನಿರ್ವಹಣೆ ಮುಂತಾದ ವಿಷಯಗಳು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಲಿವೆ’ ಎಂದು ಹೇಳಿದರು.

ಇದು ಅಭಿಮಾನಿಗಳೇ ನಿರ್ಮಿಸುತ್ತಿರುವ ದೇಶದ ಮೊಟ್ಟ ಮೊದಲ ಸ್ಮಾರಕ ಎನ್ನುವ ಅವರು, ‘ಒಳಗೆ ಹೋದರೆ ಎರಡು ತಾಸು ಅಲ್ಲಿರುವಂತೆ ಹಿಡಿದಿಟ್ಟುಕೊಳ್ಳುವಂತೆ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ನವೆಂಬರ್‍ ಒಂದರಂದು ರಾಜ್ಯೋತ್ಸವದ ಪ್ರಯುಕ್ತ ಧ್ವಜಾ ರೋಹಣ ನಡೆಯಲಿದೆ. ಮುಂದಿನ ಒಂದು ವರ್ಷದಲ್ಲಿ ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ಅನಾವರಣವಾಗಲಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

6 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

11 hours ago