ಬಾಲಿವುಡ್‍ನ ಜನಪ್ರಿಯ ನಟರಾದ ಆಮೀರ್ ಖಾನ್, ಸಲ್ಮಾನ್ ಖಾನ್ ಮತ್ತು ಶಾರೂಖ್ ಖಾನ್ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ನೋಡಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬರೀ ಅಭಿಮಾನಿಗಳಷ್ಟೇ ಅಲ್ಲ, ಮೂವರನ್ನೂ ಒಟ್ಟಿಗೆ ತೆರೆಯ ಮೇಲೆ ತರಬೇಕು ಎಂಬುದು ಹಲವು ನಿರ್ಮಾಪಕರು ಮತ್ತು ನಿರ್ದೇಶಕರ ಆಸೆ.
ಈಗ ಮೂವರೂ ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ. ಈ ವಿಷಯವನ್ನು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ರೆಡ್ ಸೀ ಫಿಲ್ಮ್ ಫೆಸ್ಟಿವಲ್‍ನಲ್ಲಿ ಭಾಗವಹಿಸಿ ಮಾತನಾಡಿರುವ ಆಮೀರ್, ಮೂವರು ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಆಮೀರ್, ‘ಸುಮಾರು ಆರು ತಿಂಗಳ ಹಿಂದೆ ನಾವು ಮೂವರು, ಒಟ್ಟಿಗೆ ಭೇಟಿಯಾಗಿದ್ದೆವು. ಈ ಸಂದರ್ಭದಲ್ಲಿ, ನಾವು ಮೂವರು ಒಟ್ಟಿಗೆ ಚಿತ್ರ ಮಾಡದಿದ್ದರೆ ಅಭಿಮಾನಿಗಳಿ ಮೋಸ ಮಾಡಿದಂತಾಗುತ್ತದೆ, ನಾವು ಒಟ್ಟಿಗೆ ನಟಿಸಿದರೆ ಹೇಗೆ ಎಂದು ಕೇಳಿದೆ. ಅವರಿಬ್ಬರೂ ಒಪ್ಪಿದರು. ಒಟ್ಟಿಗೆ ಕೆಲಸ ಮಾಡೋಣ ಎಂದು ಆಶ್ವಾಸನೆ ನೀಡಿದರು. ನಾವು ಒಟ್ಟಿಗೆ ನಟಿಸಬೇಕು ಎಂದರೆ, ಅದಕ್ಕೊಂದು ಸೂಕ್ತವಾದ ಕಥೆ ಬೇಕು. ಅಂತಹ ಕಥೆಯ ಹುಡುಕಾಟದಲ್ಲಿ ನಾವಿದ್ದೇವೆ’ ಎಂದು ಆಮೀರ್ ಹೇಳಿದ್ದಾರೆ.
ಅಂದ ಹಾಗೆ, ಆಮೀರ್ ಖಾನ್, ಸಲ್ಮಾನ್ ಖಾನ್ ಮತ್ತು ಶಾರೂಖ್ ಖಾನ್ ಮೂವರೂ ಅನಂತ್ ಅಂಬಾನಿ ಮದುವೆಯಲ್ಲಿ ‘ನಾಟ್ಟು ನಾಟ್ಟು’ ಹಾಡಿಗೆ ಹೆಜ್ಜೆ ಹಾಕಿದ್ದರು. ಮೂವರು ಒಟ್ಟಿಗೆ ಹೆಜ್ಜೆ ಹಾಕುವುದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದರು.
ಈ ಹಿಂದೆ, ಆಮೀರ್ ಖಾನ್ ಮತ್ತು ಸಲ್ಮಾನ್ ಖಾನ್, ‘ಅಂದಾಜ್ ಅಪ್ನಾ ಅಪ್ನಾ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಶಾರೂಖ್ ಖಾನ್ ಮತ್ತು ಸಲ್ಮಾನ್, ‘ಕರಣ್ ಅರ್ಜುನ್’ ಮುಂತಾದ ಚಿತ್ರಗಳಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಆಮೀರ್ ಮತ್ತು ಶಾರೂಖ್ ಖಾನ್ ಒಟ್ಟಿಗೆ ನಟಿಸುವುದಕ್ಕೆ ಸಾಧ್ಯವಾಗಿಲ್ಲ. ಹಾಗೆಯೇ, ಮೂವರೂ ಒಟ್ಟಿಗೆ ನಟಿಸಿರಲಿಲ್ಲ. ಈಗ ಅದು ಸಾಧ್ಯವಾಗುತ್ತದೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…