ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್ ಸಹ ಸೇರಿದ್ದಾರೆ.
2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್ ನಂತರದ ವರ್ಷಗಳಲ್ಲಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’, ‘ಕಿರೂಗೂರಿನ ಗಯ್ಯಾಳಿಗಳು’, ‘ರಾಘವೇಂದ್ರ ಸ್ಟೋರ್ಸ್’, ‘ಹೋಪ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿಯಾಗಿ ಪರಿಚಿತರಾಗಿರುವ ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿಯಾಗಿದ್ದಾರೆ. ತಮ್ಮ ಸಿನಿಪಯಣದ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ ‘ರೆಕ್ಕೆ ಇದ್ದರೆ ಸಾಕೆ’ ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್ ನಲ್ಲೂ’Against the Grain’ ಎಂಬ ಹೆಸರಿನಲ್ಲಿ ಈ ಪುಸ್ತಕ ಲಭ್ಯವಿದ್ದು, ಇತ್ತೀಚೆಗೆ ಬಿಡುಗಡೆಯಾಗಿದೆ.
ಪುಸ್ತಕದ ಕುರಿತು ಮಾತನಾಡುವ ಶ್ವೇತಾ, ‘ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಅಂಬೇಡ್ಕರ್ ಅವರು ಹೇಳಿದ ಮಾತು ಎಲ್ಲಾ ರಂಗಕ್ಕೂ ಅನ್ವಯಿಸುತ್ತದೆ. ಇನ್ನು, ಹೆಣ್ಣುಮಕ್ಕಳು ಮದುವೆ ಆದ ನಂತರ ಚಿತ್ರದಲ್ಲಿ ನಾಯಕಿಯಾಗಿ ನಟಿಸುವುದರ ಕುರಿತು ಚಿತ್ರರಂಗದಲ್ಲಿ ಹಲವು ಅಭಿಪ್ರಾಯಗಳಿವೆ. ಅದಕ್ಕೆ ಕಾರಣ ಏನು? ಹೆಣ್ಣು ಸ್ವಾವಲಂಬಿ ಅಲ್ಲವೇ? ಆಕೆ ಯಾವುದೇ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎಂದರೆ, ಆಕೆ ಗಂಡ ಅಥವಾ ತಂದೆಯ ಹೆಸರಿನ ಜೊತೆಗೆ ಗುರುತಿಸಿಕೊಳ್ಳುತ್ತಾಳೆ. ಈ ಪರಿಸ್ಥಿತಿ ಎಲ್ಲಾ ಕಾಲದಲ್ಲೂ ಪ್ರಸ್ತುತ. ಹಾಗಂತ ನಮ್ಮ ಸಾಧನೆಗೆ ಮನೆಯವರ ಸಹಕಾರ ಬೇಡ ಅಂತ ನಾನು ಹೇಳುತ್ತಿಲ್ಲ. ವಾಸ್ತವದ ಬಗ್ಗೆ ಮಾತನಾಡುತ್ತೇನೆ ಅಷ್ಟೆ’ ಎಂಚದರು.
ತಮ್ಮ ಸಿನಿಬದುಕು ಒಂದು ಸಾಧನೆ ಎನ್ನುವ ಶ್ವೇತಾ, ‘ನನ್ನ ಸಿನಿಬದುಕನ್ನು ಸಾಧನೆ ಅಂತ ನಾನು ಕರೆದುಕೊಳ್ಳುತ್ತೇನೆ. ಈ ಸಮಯದಲ್ಲಿ ನಾನು ಎದರಿಸಿದ ಸವಾಲುಗಳು, ಸನ್ನಿವೇಶಗಳು ಹಾಗೂ ಸಂತೋಷದ ವಿಚಾರಗಳು ಎಲ್ಲವನ್ನು ಈ ಪುಸ್ತಕದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ. ಇದನ್ನು ಬಯೋಪಿಕ್ ಅಂತಲೂ ಕರೆಯಬಹುದು. ಲೇಖಕಿಯಾಗಿ ಇದು ಮೊದಲ ಹೆಜ್ಜೆ. ಇಂದು ಭಾರತ ಸೇರಿದಂತೆ 15 ದೇಶಗಳಲ್ಲಿ ನನ್ನ ಪುಸ್ತಕ (ಆನ್ ಲೈನ್) ಬಿಡುಗಡೆಯಾಗಿದೆ. ಅಷ್ಟು ದೇಶಗಳಲ್ಲೂ ಪುಸ್ತಕ ದೊರೆಯಲಿದೆ’ ಎಂದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…