ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago