ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ.
‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಬ್ರ್ಯಾಟ್’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ ಎಂದು ಚಿತ್ರತಂಡವು ಕೆಲವೇ ದಿನಗಳ ಹಿಂದೆ ಘೋಷಿಸಿತ್ತು. ಇದೀಗ ಚಿತ್ರವು ಪ್ರೀಪೋನ್ ಆಗಿದ್ದು, ಚಿತ್ರವು, ಅಕ್ಟೋಬರ್.31ರಂದೇ ಬಿಡುಗಡೆಯಾಗುತ್ತಿದೆ. ಅಂದು ‘ದುನಿಯಾ’ ವಿಜಯ್ ಅಭಿನಯದ ‘ಮಾರುತ’ ಚಿತ್ರ ಸಹ ಬಿಡುಗಡೆಯಾಗುತ್ತಿದೆ.
ಇದನ್ನು ಓದಿ: ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್
ಈಗಾಗಲೇ, ‘ಬ್ರ್ಯಾಟ್’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ‘ಗಂಗಿ ಗಂಗಿ…’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.
ಈ ಹಿಂದೆ ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.
‘ಬ್ರ್ಯಾಟ್’ ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…