ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.
‘ನನ್ನ ನಿರ್ದೇಶನದ ಮತ್ತು ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು OTT ಮತ್ತು ಯೂಟ್ಯೂಬ್‍ನಲ್ಲಿ ನೋಡಿ, ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಂಡೆವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರೇಕ್ಷಕರೇ, ಇದೀಗ ನಮ್ಮದೇ ತಂಡದ ‘ಬ್ರ್ಯಾಟ್’ ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರ ಪ್ರಶಂಸೆಗಳಿಸಿ ಮೂರನೇ ವಾರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಳ್ಳದಿರಿ’ ಎಂದು ಬರೆದುಕೊಂಡಿದ್ದಾರೆ.
ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಅಕ್ಟೊಬರ್.31ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.





