ಮನರಂಜನೆ

‘ಬ್ರ್ಯಾಟ್‍’ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಲು ಕರೆ

ಶಶಾಂಕ್‍ ನಿರ್ದೇಶನದ ‘ಬ್ರ್ಯಾಟ್‍’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್‍, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.

‘ನನ್ನ ನಿರ್ದೇಶನದ ಮತ್ತು ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು OTT ಮತ್ತು ಯೂಟ್ಯೂಬ್‍ನಲ್ಲಿ ನೋಡಿ, ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್‍ ಮಾಡಿಕೊಂಡೆವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರೇಕ್ಷಕರೇ, ಇದೀಗ ನಮ್ಮದೇ ತಂಡದ ‘ಬ್ರ್ಯಾಟ್’ ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರ ಪ್ರಶಂಸೆಗಳಿಸಿ ಮೂರನೇ ವಾರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್‍ ಮಾಡಿಕೊಳ್ಳದಿರಿ’ ಎಂದು ಬರೆದುಕೊಂಡಿದ್ದಾರೆ.

ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ‘ಬ್ರ್ಯಾಟ್‍’ ಚಿತ್ರವು ಅಕ್ಟೊಬರ್.31ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್‍ ಮಂಜು, ಅಚ್ಯುತ್‍ ಕುಮಾರ್‍, ರಮೇಶ್‍ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಷ್‍ ಕಲ್ಲತ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

5 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

7 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago