ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ ಮತದಾನ ನಡೆಯುತ್ತಿದ್ದು, ಟಾಲಿವುಟ್ ಸ್ಟಾರ್ ಅಲ್ಲು ಅರ್ಜುನ್ ಎಲ್ಲರು ಬಂದು ಮತದಾನ ಮಾಡಿ ಇದು ನಿಮ್ಮ ಮುಂದಿನ ಐದು ವರ್ಷಗಳ ನಿರ್ಣಾಯಕ ದಿನ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಇಂದು ಮತದಾನ ಮಾಡಿ ಬಳಿಕ ತಮ್ಮ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇಂದು ಬಿಸಿಲಿನ ಬೇಗೆ ಜಾಸ್ತಿಯಿದೆ. ಸ್ವಲ್ಪ ಸಹಿಸಿಕೊಂಡು ಮತದಾನ ಮಾಡಿ, ಇದು ನಿಜಕ್ಕೂ ನಿಮಗೆ ಜವಾಬ್ದಾರಿಯುತ ದಿನವಾಗಿದೆ. ಸ್ವಲ್ಪ ಹೆಚ್ಚಿನ ಶ್ರಮ ವಹಿಸಿ ಮತದಾನ ಮಾಡುವ ಮೂಲಕ ತಮ್ಮ ಮುಂದಿನ ಐದು ವರ್ಷಗಳ ಉತ್ತಮ ಆಡಳಿತಕ್ಕೆ ಬುನಾದಿ ಹಾಕಿ ಎಂದು ಹೇಳಿದ್ದಾರೆ.
ಇನ್ನು ದೇಶಾದ್ಯಂತ ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಪಶ್ಚಿಮ ಬಂಗಾಳ 8, ಮಧ್ಯಪ್ರದೇ 8, ಬಿಹಾರ 5, ಜಾರ್ಖಂಡ್ ಹಾಗೂ ಒಡಿಸ್ಸಾದ 4 ಕ್ಷೇತ್ರ ಮತ್ತು ಜಮ್ಮು ಕಾಶ್ಮೀರಾದ 1 ಕ್ಷೇತ್ರಗಳಿಗ ಮತದಾನ ನಡೆಯುತ್ತಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…