ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಇಬ್ಬರು ನಟಿಯರಿಗೆ ಸಿಸಿಬಿ ಬಿಗ್ ಶಾಕ್ ನೀಡಿದೆ.
ಡ್ರಗ್ಸ್ ಕೇಸ್‌ನಲ್ಲಿ ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ನಟಿಯರ ಎಫ್‌ಐಆರ್ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ, ರಾಗಿಣಿ ಹಾಗೂ ವೀರೇನ್ ಖನ್ನಾ ಎಫ್‌ಐಆರ್‌ನ್ನು ಹೈಕೋರ್ಟ್ ರದ್ದು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಮೂಲಕ ಸ್ಯಾಂಡಲ್‌ವುಡ್ ಇಬ್ಬರು ನಟಿಯರಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.





