ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್ ಲೀಗ್(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ಉದ್ಯಮಿ ಆಶೋಕ್ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿಗೆ ತಪ್ಪಿಸಿಕೊಂಡಿದ್ದ ಗಣೇಶ್ ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಫೆ.8ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣಸಾಡಲಿವೆ.
ಲೀಗ್‌ನಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಲಿವೆ. ಅವುಗಳೆಂದರೆ ಚೆನ್ನೈ ರೈನ್ಹೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್‌ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್, ಕರ್ನಾಟಕ ಬುಲ್ಡೋಜರ್ಸ್.
ಕರ್ನಾಟಕ ಬುಲ್ಡೋಜರ್ಸ್ ತಂಡ: ಸುದೀಪ್, ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಒ ಭಂಡಾರಿ, ಕರಣ್ ಆರ್ಯನ್, ಮಂಜುನಾಥ ಗೌಡ, ಸಾಗರ್ ಗೌಡ, ಅಲಕಾನಂದ, ತ್ರಿವಿಕ್ರಮ್.
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…