Rajavardhans new film
‘ಬಿಚ್ಚುಗತ್ತಿ’ ನಂತರ ರಾಜವರ್ಧನ್ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು.
ಹೀಗಿರುವಾಗಲೇ, ರಾಜವರ್ಧನ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿಯೊಂದು ಬಂದಿದೆ. ವಿಶೇಷವೆಂದರೆ, ಈ ಚಿತ್ರವನ್ನು ‘ಬಿಗ್ ಬಾಸ್’ ಸ್ಪರ್ಧಿ ಮತ್ತು ಸದ್ಯ ಸುದೀಪ್ ಅವರ ಮ್ಯಾನೇಜರ್ ಆಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ.
ಪಕ್ಕಾ ಕನ್ನಡದ ಸೂಗಡಿನ ಮಾಸ್ ಮನರಂಜನೆಯ ಕಥೆಯನ್ನು ರಾಜವರ್ಧನ್‍ಗಾಗಿ ಚಕ್ರವರ್ತಿ ಚಂದ್ರಚೂಡ್ ಬರೆದಿದ್ದು, ಅದನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ಈ ಚಿತ್ರದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನು ಚಿತ್ರತಂಡದವರು ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಮತ್ತು ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ.
ಈ ಮಧ್ಯೆ, ರಾಜವರ್ಧನ್, ನಟಿ ರಾಗಿಣಿ ಮತ್ತು ‘ಚಿತ್ರಸಂತೆ’ ನಿಯತಕಾಲಿಕೆಯ ಗಿರೀಶ್ ಗೌಡ ಅವರ ಜೊತೆಗೆ ಸೇರಿ ಇವೆಂಟ್ ಮ್ಯಾನೇಜ್‍ಮೆಂಟ್ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವ ಸುದ್ದಿ ಇದ್ದು, ಮೇ 01ರಂದು ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…