ಮನರಂಜನೆ

ರಾಜವರ್ಧನ್ ಹೊಸ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ

‘ಬಿಚ್ಚುಗತ್ತಿ’ ನಂತರ ರಾಜವರ್ಧನ್‍ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್‍, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು.

ಹೀಗಿರುವಾಗಲೇ, ರಾಜವರ್ಧನ್‍ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿಯೊಂದು ಬಂದಿದೆ. ವಿಶೇಷವೆಂದರೆ, ಈ ಚಿತ್ರವನ್ನು ‘ಬಿಗ್‍ ಬಾಸ್‍’ ಸ್ಪರ್ಧಿ ಮತ್ತು ಸದ್ಯ ಸುದೀಪ್‍ ಅವರ ಮ್ಯಾನೇಜರ್‍ ಆಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್‍ ನಿರ್ದೇಶನ ಮಾಡುತ್ತಿದ್ದಾರೆ.

ಪಕ್ಕಾ ಕನ್ನಡದ ಸೂಗಡಿನ ಮಾಸ್ ಮನರಂಜನೆಯ ಕಥೆಯನ್ನು ರಾಜವರ್ಧನ್‍ಗಾಗಿ ಚಕ್ರವರ್ತಿ ಚಂದ್ರಚೂಡ್‍ ಬರೆದಿದ್ದು, ಅದನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ಈ ಚಿತ್ರದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನು ಚಿತ್ರತಂಡದವರು ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಮತ್ತು ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ.

ಈ ಮಧ್ಯೆ, ರಾಜವರ್ಧನ್‍, ನಟಿ ರಾಗಿಣಿ ಮತ್ತು ‘ಚಿತ್ರಸಂತೆ’ ನಿಯತಕಾಲಿಕೆಯ ಗಿರೀಶ್‍ ಗೌಡ ಅವರ ಜೊತೆಗೆ ಸೇರಿ ಇವೆಂಟ್‍ ಮ್ಯಾನೇಜ್‍ಮೆಂಟ್‍ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವ ಸುದ್ದಿ ಇದ್ದು, ಮೇ 01ರಂದು ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

15 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

15 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

17 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

17 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

17 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

18 hours ago