Chandan Kumar Flirt Kannada Movie Nee Nanna Jeeva Kichcha Sudeepa
‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು ಬರೀ ನಾಯಕರಷ್ಟೇ ಅಲ್ಲ, ನಿರ್ಮಾಪಕ-ನಿರ್ದೇಶಕರೂ ಹೌದು.
ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ‘ಫ್ಲರ್ಟ್’ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಂದನ್ ಸಿನಿಮಾ ಮಾಡಿರುವುದಷ್ಟೇ ಅಲ್ಲ, ತಾವೇ ‘ಫ್ಲರ್ಟ್’ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸುದೀಪ್ ಒಂದು ಹಾಡನ್ನು ಹಾಡಿದ್ದು, ಸೋಮವಾರ ಸಂಜೆ ಈ ಹಾಡು ಬಿಡುಗಡೆಯಾಗಿದೆ.
ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್ ಸಾಹಿತ್ಯ ಬರೆದಿದ್ದು, ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್ ಧ್ವನಿಯಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಚಂದನ್, ‘ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನಿಜ ಹೇಳಬೇಕೆಂದರೆ, ಈ ಚಿತ್ರ ಯಾವ ಜಾನರ್‍ಗೆ ಸೇರಬೇಕೆಂದು ನನಗೆ ಗೊತ್ತಿಲ್ಲ. ಏಕೆಂದರೆ, ಈ ಚಿತ್ರದಲ್ಲಿ ಹಲವು ಅಂಶಗಳು ಇವೆ. ನಾನು ಸಿಂಗಲ್ ಆಗಿದ್ದಾಗ ಚಿತ್ರದ ಕಥೆ ಬರೆದೆ. ಮದುವೆಯಾದಾಗ ಚಿತ್ರೀಕರಣ ಮಾಡಿದೆ. ಇದೀಗ ಮಗುವೂ ಆಗಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದರು.
ಈ ಚಿತ್ರದಲ್ಲಿ ಗಿರೀಶ್ ಶಿವಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿರುವ ಅವರು, ‘ಅನ್ನನೂ ಹಳಿಸಿತ್ತು, ನಾಯಿನೂ ಹಸಿದಿತ್ತು ಅಂತ ಮಾತಿದೆ, ಅಂಥದ್ದೊಂದು ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಗಿರಿ ಚೆನ್ನಾಗಿ ನಟಿಸ್ತಾನೆ ಅಂತ ಹೇಳೋಕೆ ಈ ಸಿನಿಮಾ ತೋರಿಸಿದ್ರೆ ಸಾಕು. ಚಂದನ್ ನಟನಿಗಿಂಥ ಹೆಚ್ಚಾಗಿ ನಿರ್ದೇಶಕರಾಗಿ ಚಂದನ್ ಇಷ್ಟವಾದರು’ ಎಂದು ಹೇಳಿದರು.
ಈ ಚಿತ್ರದಲ್ಲಿ ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಜೊತೆಗೆ ಸಾಧು ಕೋಕಿಲ, ಶ್ರುತಿ, ಮೂಗು ಸುರೇಶ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…