ಮನರಂಜನೆ

ವಿಚ್ಛೇದನದ ನಂತರ ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಚಂದನ್ ಹಾಗೂ ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ.

ಚಂದನ್‍ ಮತ್ತು ನಿವೇದಿತಾ ಒಟ್ಟಿಗೆ ಇದ್ದ ಕಾಲಕ್ಕೆ ಜೊತೆಯಾಗಿ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಬಹುತೇಕ ಚಿತ್ರೀಕರಣವೂ ಆಗಿತ್ತು. ಆದರೆ, ಚಿತ್ರ ಬಿಡುಗಡೆ ಆಗುವುದಕ್ಕೆ ಮೊದಲೇ ಇಬ್ಬರೂ ದೂರಾದರು. ಈಗ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ ಚಂದನ್‍ ಮತ್ತು ನಿವೇದಿತಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿಬಂದಿತ್ತು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೇದಿತಾ, ‘ಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಆ ದೃಶ್ಯ ಸಹ ಬಹಳ ಎಮೋಷನಲ್‍ ಆಗಿದೆ. ನಮ್ಮಿಬ್ಬರಲ್ಲೂ ಒಂದೊಳ್ಳೆಯ ಬಂಧವಿತ್ತು. ಹಾಗಾಗಿ, ಸಹಜವಾಗಿಯೇ ಅಳು ಬಂತು’ ಎಂದು ಹೇಳಿದರು.

‘ಮುದ್ದು ರಾಕ್ಷಸಿ’ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

12 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

13 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

14 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

16 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

16 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

16 hours ago