ಕನ್ನಡದ ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಇಚ್ಛೆಯ ಮೇರೆಗೆ ಇಂದು (ಜೂನ್.7) ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿಯಿತು.
ಇದರ ಬೆನ್ನಲ್ಲೇ ತಾವು ಯಾವ ಕಾರಣಕ್ಕೆ ವಿಚ್ಛೇದನ ಪಡೆದುಕೊಂಡೆವು ಎಂಬ ಬಗ್ಗೆ ಈ ಇಬ್ಬರು ಮೊಲದ ಬಾರಿಗೆ ಮಾತನಾಡಿದ್ದಾರೆ.
ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ. ಇವರಿಗೆ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿ ತೀರ್ಪು ನೀಡಿದೆ. ಸಿಕ್ಷನ್ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.
ಇನ್ನು ಈ ವಿಚ್ಛೇದನ ಬಗ್ಗೆ ಮಾತನಾಡಿರುವ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, “ಈ ದಿನ ನಾನು ಮತ್ತು ಚಂದನ್/ನಿವೇದಿತಾ, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಲಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲ ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದ” ಎಂದು ಚಂದ್ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ತಾವು ವಿಚ್ಛೇದನ ಹೊಂದಿದ ವಿಷಯವನ್ನು ಬಹಿರಂಗಪಡಿಸಿದ್ದಾರೆ.






