ಮನರಂಜನೆ

ವಿಚ್ಛೇದನ ದೃಢಪಡಿಸಿದ ಚಂದನ್‌-ನಿವೇದಿತಾ ಜೋಡಿ

ಕನ್ನಡದ ಖ್ಯಾತ ಗಾಯಕ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಇಚ್ಛೆಯ ಮೇರೆಗೆ ಇಂದು (ಜೂನ್‌.7) ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್‌ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿಯಿತು.

ಇದರ ಬೆನ್ನಲ್ಲೇ ತಾವು ಯಾವ ಕಾರಣಕ್ಕೆ ವಿಚ್ಛೇದನ ಪಡೆದುಕೊಂಡೆವು ಎಂಬ ಬಗ್ಗೆ ಈ ಇಬ್ಬರು ಮೊಲದ ಬಾರಿಗೆ ಮಾತನಾಡಿದ್ದಾರೆ.

ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್‌ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್‌ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ. ಇವರಿಗೆ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿ ತೀರ್ಪು ನೀಡಿದೆ. ಸಿಕ್ಷನ್‌ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.

ಇನ್ನು ಈ ವಿಚ್ಛೇದನ ಬಗ್ಗೆ ಮಾತನಾಡಿರುವ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಜೋಡಿ, “ಈ ದಿನ ನಾನು ಮತ್ತು ಚಂದನ್‌/ನಿವೇದಿತಾ, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಲಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲ ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದ” ಎಂದು ಚಂದ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ತಾವು ವಿಚ್ಛೇದನ ಹೊಂದಿದ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

36 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

1 hour ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

1 hour ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

1 hour ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

1 hour ago