ಮನರಂಜನೆ

‘ಮುದ್ದು ರಾಕ್ಷಸಿ’ಯ ಹಿಂದಿನ ‘ಸೂತ್ರಧಾರಿ’ ಎರಡು ಚಿತ್ರಗಳೊಂದಿಗೆ ಬಂದ ಚಂದನ್ ಶೆಟ್ಟಿ

ನಿಜಜೀವನದಲ್ಲಿ ದಂಪತಿಯಾಗಿದ್ದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ, ಕಳೆದ ವರ್ಷ ದೂರಾಗಿದ್ದಾರೆ. ಅದಕ್ಕೂ ಮೊದಲು ಅವರಿಬ್ಬರೂ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು. ಆದರೆ, ನಿವೇದಿತಾ-ಚಂದನ್ ದೂರಾದರೂ, ಚಿತ್ರದ ಚಿತ್ರೀಕರಣ ಮಾತ್ರ ಮುಗಿದಿರಲಿಲ್ಲ. ಈಗ ಈ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ತಲುಪಿದೆ.

ಪುನೀತ್ ಶ್ರೀನಿವಾಸ್ ನಿರ್ದೇಶನದ ‘ಮುದ್ದು ರಾಕ್ಷಸಿ’ ಚಿತ್ರವನ್ನು ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಚಂದನ್ ಶೆಟ್ಟಿ – ನಿವೇದಿತಾಗೌಡ ವಿಚ್ಛೇದನ ಪಡೆದ ನಂತರ ಬಾಕಿ ಉಳಿದಿದ್ದ ಕೆಲವು ಭಾವನಾತ್ಮಕ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ವಜ್ರಮುನಿ ಫಾರಂಹೌಸ್‌ನಲ್ಲಿ ನಡೆಸಲಾಯಿತು. ವಿಚ್ಛೇದನದ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಅಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಬೀಳ್ಕೊಡುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿ ಬಂದಿದೆ. ಈ ದೃಶ್ಯದ ಚಿತ್ರೀಕರಣದ ಮೂಲಕ ‘ಮುದ್ದು ರಾಕ್ಷಸಿ’ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ.

ಇನ್ನು, ಮೂರು ವರ್ಷಗಳ ಹಿಂದೆ ‘ಸೂತ್ರಧಾರಿ’ ಎಂಬ ಚಿತ್ರಕ್ಕೆ ಚಂದನ್ ನಾಯಕನಾಗಿದ್ದರು. ಚಿತ್ರೀಕರಣ ಮುಗಿದು ಒಂದು ವರ್ಷವಾದರೂ ಚಿತ್ರದ ಬಿಡುಗಡೆಯ ಸುಳಿವೇ ಇರಲಿಲ್ಲ. ಇದೀಗ ಚಿತ್ರವು ಮೇ ೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ನವರಸನ್ ನಿರ್ಮಿಸಿದ್ದಾರೆ.

ಚಂದನ್ ಎದುರು ಅಪೂರ್ವ ನಾಯಕಿಯಾಗಿ ನಟಿಸಿದ್ದು, ಸಂಜನಾ ಆನಂದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ‘ಸೂತ್ರಧಾರಿ’ಯ ಕುರಿತು ಚಂದನ್, ‘ನಾಯಕನಾಗಿ ಇದು ಮೊದಲ ಸಿನಿಮಾ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ’ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago