Mysore
19
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಅವರಿಬ್ಬರ ನಡುವೆ ‘ಕರಿಮಣಿ ಮಾಲಿಕ’ ಯಾರು?

karimani malika neenalla (1)

ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ ಸಂಗೀತ ಸಂಯೋಜಿಸುವ ಮೂಲಕ ಸಂಗೀತ ನಿರ್ದೇಶಕರೂ ಆಗಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ.

ಬಿ.ಎಂ.ಟಿ.ಸಿಯಲ್ಲಿ ಕೆಲಸ ಮಾಡುತ್ತಿರುವ ಮಾರುತಿ ಚಿತ್ರದ ನಾಯಕನಾಗಿದ್ದು, ರಮಿಕ ಸುತಾರ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಕ್ರೋಚ್ ಸುಧಿ ಕಾಣಿಸಿಕೊಂಡಿದ್ದಾರೆ.

‘ಕರಿಮಣಿ ಮಾಲಿಕ ನೀನಲ್ಲ’, ಚಂದ್ರು ನಿರ್ದೇಶನದ ಒಂಬತ್ತನೇ ಚಿತ್ರವಂತೆ. ‘ಇದು ಬೆಂಗಳೂರಿನಲ್ಲೇ ನಡೆದಂಥ ನೈಜ ಘಟನೆ ಆಧಾರಿತ ಚಿತ್ರ. ಎಳನೀರು ಮಾರೋ ಹುಡುಗ, ಹೂ ಮಾರೋ ಹುಡುಗಿಯ ನಡುವೆ ನಡೆಯೋ ವಿಭಿನ್ನ ಪ್ರೇಮಕಥೆ ಇದಾಗಿದ್ದು, ಇವರಿಬ್ಬರ ನಡುವೆ ಮತ್ತೊಬ್ಬನ ಎಂಟ್ರಿ ಆಗುತ್ತದೆ. ಇಲ್ಲಿ ನಾಯಕಿಯ ಕರಿಮಣಿ ಮಾಲೀಕ ಯಾರಾಗ್ತಾರೆ ಅನ್ನೋದೇ ಚಿತ್ರದ ಕಥೆ. ನಾನು ರೆಡಿ ಮಾಡಿಕೊಂಡಿದ್ದ ಕಥೆಗೆ ಇದೇ ಟೈಟಲ್ ಸೂಕ್ತ ಎನಿಸಿ ಈ ಶೀರ್ಷಿಕೆ ಇಟ್ಟಿದ್ದೇನೆ. ಚಿತ್ರದ ಶೀರ್ಷಿಕೆ ಗೀತೆಯನ್ನು ಪಾವಗಡದ ಬಳಿಯಿರುವ ನಿಡಗಲ್ ಬೆಟ್ಟದಲ್ಲಿ ಶೂಟ್ ಮಾಡಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಿತ್ರಕ್ಕೆ ನಾನೇ ಸಂಗೀತ ಸಂಯೋಜಿಸಿದ್ದೇನೆ’ ಎಂದರು.

ನಂತರ ಚಿತ್ರದ ನಾಯಕ ನಟ ಮಾರುತಿ ಬಿಎಂಟಿಸಿ, ಮಾತನಾಡುತ್ತ ಸದ್ಯ ‘ನಾನೀಗ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಬ್ಯಾಡಗಿ ತಾಲ್ಲೂಕು ಕಾಗಿನೆಲೆಯಲ್ಲಿ ವಿದ್ಯಾಭ್ಯಾಸ ಮಾಡಿದೆ. ವಿದ್ಯಾಭ್ಯಾಸದ ದಿನಗಳಲ್ಲಿ ಅನೇಕ ನಾಟಕಗಳನ್ನು ಮಾಡುತ್ತಿದ್ದೆ. ಚಲನಚಿತ್ರ ಕಲಾವಿದನಾಗಬೇಕೆನ್ನುವುದು ನನ್ನ ಬಹುದಿನಗಳ ಕನಸು. ಆ ಕನಸು ಈ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಎಳನೀರು ಮಾರೋ ಹುಡುಗನಾಗಿ ನಟಿಸಿದ್ದೇನೆ’ ಎಂದು ಹೇಳಿದರು.

ರಮಿಕಾ ಸುತಾರ ಮೂಲತಃ ಗುಲ್ಬರ್ಗದವರಂತೆ. ‘ಸಿನಿಮಾ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಈ ಚಿತ್ರದಲ್ಲಿ ಒಬ್ಬ ಹೂಮಾರುವ ಹುಡುಗಿಯಾಗಿ ನಟಿಸಿದ್ದೇನೆ. ಸ್ವಲ್ಪ ಬಜಾರಿ ತರಹದ ಪಾತ್ರ. ಆಡಿಷನ್‌ನಲ್ಲಿ ಆಯ್ಕೆ ಆಗಿ ಈ ಚಿತ್ರದಲ್ಲಿ ನಟಿಸಿದ್ದೇನೆ’ ಎಂದು ಹೇಳಿದರು.

ಚಿತ್ರದ ಮತ್ತೊಬ್ಬ ನಾಯಕ ಕಾಕ್ರೋಚ್ ಸುಧೀ ಮಾತನಾಡಿ, ‘ನಾಯಕ-ನಾಯಕಿ ಮಧ್ಯೆ ಬರುವ ಮತ್ತೊಬ್ಬ ವ್ಯಕ್ತಿಯ ಪಾತ್ರವನ್ನು ನಾನು ಮಾಡಿದ್ದೇನೆ. ಮಾರುತಿ ಅವರು ತುಂಬಾ ಕನಸಿಟ್ಟುಕೊಂಡು ಸಿನಿಮಾಗೆ ಬಂದಿದ್ದಾರೆ. ನೀನಲ್ಲ, ನೀನೇ ನಲ್ಲ ಅಂತ ನಾಯಕಿ ಯರ‍್ಯಾರಿಗೆ ಹೇಳ್ತಾಳೆ ಅನ್ನೋದೇ ಚಿತ್ರದ ಕಥೆ’ ಎಂದರು.

‘ಕರಿಮಣಿ ಮಾಲಿಕ ನೀನಲ್ಲ’ ಚಿತ್ರದಲ್ಲಿ ಮೂಗು ಸುರೇಶ್, ರೇಖಾ ದಾಸ್ ಮುಂತಾದವರು ನಟಿಸಿದ್ದಾರೆ.

Tags:
error: Content is protected !!