karimani malika neenalla (1)
ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ ಸಂಗೀತ ಸಂಯೋಜಿಸುವ ಮೂಲಕ ಸಂಗೀತ ನಿರ್ದೇಶಕರೂ ಆಗಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ.
ಬಿ.ಎಂ.ಟಿ.ಸಿಯಲ್ಲಿ ಕೆಲಸ ಮಾಡುತ್ತಿರುವ ಮಾರುತಿ ಚಿತ್ರದ ನಾಯಕನಾಗಿದ್ದು, ರಮಿಕ ಸುತಾರ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಕ್ರೋಚ್ ಸುಧಿ ಕಾಣಿಸಿಕೊಂಡಿದ್ದಾರೆ.
‘ಕರಿಮಣಿ ಮಾಲಿಕ ನೀನಲ್ಲ’, ಚಂದ್ರು ನಿರ್ದೇಶನದ ಒಂಬತ್ತನೇ ಚಿತ್ರವಂತೆ. ‘ಇದು ಬೆಂಗಳೂರಿನಲ್ಲೇ ನಡೆದಂಥ ನೈಜ ಘಟನೆ ಆಧಾರಿತ ಚಿತ್ರ. ಎಳನೀರು ಮಾರೋ ಹುಡುಗ, ಹೂ ಮಾರೋ ಹುಡುಗಿಯ ನಡುವೆ ನಡೆಯೋ ವಿಭಿನ್ನ ಪ್ರೇಮಕಥೆ ಇದಾಗಿದ್ದು, ಇವರಿಬ್ಬರ ನಡುವೆ ಮತ್ತೊಬ್ಬನ ಎಂಟ್ರಿ ಆಗುತ್ತದೆ. ಇಲ್ಲಿ ನಾಯಕಿಯ ಕರಿಮಣಿ ಮಾಲೀಕ ಯಾರಾಗ್ತಾರೆ ಅನ್ನೋದೇ ಚಿತ್ರದ ಕಥೆ. ನಾನು ರೆಡಿ ಮಾಡಿಕೊಂಡಿದ್ದ ಕಥೆಗೆ ಇದೇ ಟೈಟಲ್ ಸೂಕ್ತ ಎನಿಸಿ ಈ ಶೀರ್ಷಿಕೆ ಇಟ್ಟಿದ್ದೇನೆ. ಚಿತ್ರದ ಶೀರ್ಷಿಕೆ ಗೀತೆಯನ್ನು ಪಾವಗಡದ ಬಳಿಯಿರುವ ನಿಡಗಲ್ ಬೆಟ್ಟದಲ್ಲಿ ಶೂಟ್ ಮಾಡಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಿತ್ರಕ್ಕೆ ನಾನೇ ಸಂಗೀತ ಸಂಯೋಜಿಸಿದ್ದೇನೆ’ ಎಂದರು.
ನಂತರ ಚಿತ್ರದ ನಾಯಕ ನಟ ಮಾರುತಿ ಬಿಎಂಟಿಸಿ, ಮಾತನಾಡುತ್ತ ಸದ್ಯ ‘ನಾನೀಗ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಬ್ಯಾಡಗಿ ತಾಲ್ಲೂಕು ಕಾಗಿನೆಲೆಯಲ್ಲಿ ವಿದ್ಯಾಭ್ಯಾಸ ಮಾಡಿದೆ. ವಿದ್ಯಾಭ್ಯಾಸದ ದಿನಗಳಲ್ಲಿ ಅನೇಕ ನಾಟಕಗಳನ್ನು ಮಾಡುತ್ತಿದ್ದೆ. ಚಲನಚಿತ್ರ ಕಲಾವಿದನಾಗಬೇಕೆನ್ನುವುದು ನನ್ನ ಬಹುದಿನಗಳ ಕನಸು. ಆ ಕನಸು ಈ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಎಳನೀರು ಮಾರೋ ಹುಡುಗನಾಗಿ ನಟಿಸಿದ್ದೇನೆ’ ಎಂದು ಹೇಳಿದರು.
ರಮಿಕಾ ಸುತಾರ ಮೂಲತಃ ಗುಲ್ಬರ್ಗದವರಂತೆ. ‘ಸಿನಿಮಾ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಈ ಚಿತ್ರದಲ್ಲಿ ಒಬ್ಬ ಹೂಮಾರುವ ಹುಡುಗಿಯಾಗಿ ನಟಿಸಿದ್ದೇನೆ. ಸ್ವಲ್ಪ ಬಜಾರಿ ತರಹದ ಪಾತ್ರ. ಆಡಿಷನ್‌ನಲ್ಲಿ ಆಯ್ಕೆ ಆಗಿ ಈ ಚಿತ್ರದಲ್ಲಿ ನಟಿಸಿದ್ದೇನೆ’ ಎಂದು ಹೇಳಿದರು.
ಚಿತ್ರದ ಮತ್ತೊಬ್ಬ ನಾಯಕ ಕಾಕ್ರೋಚ್ ಸುಧೀ ಮಾತನಾಡಿ, ‘ನಾಯಕ-ನಾಯಕಿ ಮಧ್ಯೆ ಬರುವ ಮತ್ತೊಬ್ಬ ವ್ಯಕ್ತಿಯ ಪಾತ್ರವನ್ನು ನಾನು ಮಾಡಿದ್ದೇನೆ. ಮಾರುತಿ ಅವರು ತುಂಬಾ ಕನಸಿಟ್ಟುಕೊಂಡು ಸಿನಿಮಾಗೆ ಬಂದಿದ್ದಾರೆ. ನೀನಲ್ಲ, ನೀನೇ ನಲ್ಲ ಅಂತ ನಾಯಕಿ ಯರ‍್ಯಾರಿಗೆ ಹೇಳ್ತಾಳೆ ಅನ್ನೋದೇ ಚಿತ್ರದ ಕಥೆ’ ಎಂದರು.
‘ಕರಿಮಣಿ ಮಾಲಿಕ ನೀನಲ್ಲ’ ಚಿತ್ರದಲ್ಲಿ ಮೂಗು ಸುರೇಶ್, ರೇಖಾ ದಾಸ್ ಮುಂತಾದವರು ನಟಿಸಿದ್ದಾರೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…
ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…