ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ತೆಲುಗು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಅವರನ್ನು ಮುಂಬೈನ ಸ್ಥಳೀಯ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದು, 3 ತಿಂಗಳ ಒಳಗಾಗಿ ಹಣ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
2018ರಲ್ಲಿ ಮುಂಬೈನಲ್ಲಿ ರಾಮ್‌ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎನ್ನುವವರು ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹಲವು ಬಾರಿ ನೋಟಿಸ್ ನೀಡಿತ್ತು. ಆದರೂ ಅವರು ಹಾಜರಾಗಿರಲಿಲ್ಲ.
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ರಾಮಗೋಪಾಲ್ ವರ್ಮಾ ಅವರು ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ. ಒಂದು ವೇಳೆ 3 ತಿಂಗಳ ಒಳಗಾಗಿ ಹಣ ಪಾವತಿಸದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…