ವಿಜಯ್ ರಾಘವೇಂದ್ರ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರವೆಂದರೆ ಅದು ‘ಚಿನ್ನಾರಿ ಮುತ್ತ’. ನಾಗಾಭರಣ ನಿರ್ದೇಶನದ ಈ ಚಿತ್ರವು ಜನರ ಮನಸ್ಸಿನಲ್ಲಿ ಅದೆಷ್ಟು ಹಸಿರಾಗಿದೆಯೆಂದರೆ, ಈಗಲೂ ವಿಜಯ್ ರಾಘವೇಂದ್ರ ಅವರನ್ನು ‘ಚಿನ್ನಾರಿ ಮುತ್ತ’ನಾಗಿಯೇ ಪ್ರೀತಿಸುತ್ತಾರೆ. ಈಗ ಆ ‘ಚಿನ್ನಾರಿ ಮುತ್ತ’, ‘ಜೀನಿಯಸ್ ಮುತ್ತ’ನಿಗೆ ಬೆಂಬಲವಾಗಿ ನಿಂತಿದ್ದಾರೆ.
ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಕ್ಕೆ ‘ಜೀನಿಯಸ್ ಮುತ್ತ’ ಎಂಬ ಹೆಸರಿಡಲಾಗಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಮಾಸ್ಟರ್ ಶ್ರೇಯಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್ ರಾಘವೇಂದ್ರ ಸಹ ಅಭಿನಯಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ನಾಗಿಣಿ ಭರಣ ಅವರಿಗೆ ಪರಿಚಯಸ್ಥರೆಲ್ಲರೂ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಒತ್ತಾಯಿಸುತ್ತಲೇ ಇದ್ದರಂತೆ. ‘ಒಮ್ಮೆ ನಿರ್ಮಾಪಕಿ ಲತಾ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ, ನೀವೇ ಚಿತ್ರ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಮಾಡಿದೆ. ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಈಗಾಗಲೇ ಒಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ನಾಗಿಣಿ ಭರಣ ತಿಳಿಸಿದರು.
ಒಬ್ಬ ಸಾಮಾನ್ಯ ಹುಡುಗ ತನ್ನ ಬುದ್ಧಿಶಂತಿಕೆಯಿಂದ ದೊಡ್ಡದನ್ನು ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಶ್ರೇಯಸ್ ನಟಿಸಿದ್ದಾರೆ. ‘ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಅಭಿನಯಿಸಿದ್ದೇನೆ’ ಎಂದರು.
ನಾಗಾಭರಣ ಅವರಿಗೆ ತಾನು ಯಾವಾಗಲೂ ಆಭಾರಿ ಎನ್ನುವ ವಿಜಯ್ ರಾಘವೇಂದ್ರ, ‘ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ‘ಚಿನ್ನಾರಿ ಮುತ್ತ’ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎಂದು ವಿಜಯ ರಾಘವೇಂದ್ರ ತಿಳಿಸಿದರು.
‘ಜೀನಿಯಸ್ ಮುತ್ತ’ ಚಿತ್ರದಲ್ಲಿ ಮಾಸ್ಟರ್ ಶ್ರೇಯಸ್ಸ, ವಿಜಯ್ ರಾಘವೇಂದ್ರ, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಬಾಪು ಪದ್ಮನಾಭ ಸಂಗೀತ ಸಂಯೋಜಿಸಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…