ಮನರಂಜನೆ

‘ಜೀನಿಯಸ್ ಮುತ್ತ’ನ ಜೊತೆಯಾದ ‘ಚಿನ್ನಾರಿ ಮುತ್ತ’

ವಿಜಯ್‍ ರಾಘವೇಂದ್ರ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರವೆಂದರೆ ಅದು ‘ಚಿನ್ನಾರಿ ಮುತ್ತ’. ನಾಗಾಭರಣ ನಿರ್ದೇಶನದ ಈ ಚಿತ್ರವು ಜನರ ಮನಸ್ಸಿನಲ್ಲಿ ಅದೆಷ್ಟು ಹಸಿರಾಗಿದೆಯೆಂದರೆ, ಈಗಲೂ ವಿಜಯ್‍ ರಾಘವೇಂದ್ರ ಅವರನ್ನು ‘ಚಿನ್ನಾರಿ ಮುತ್ತ’ನಾಗಿಯೇ ಪ್ರೀತಿಸುತ್ತಾರೆ. ಈಗ ಆ ‘ಚಿನ್ನಾರಿ ಮುತ್ತ’, ‘ಜೀನಿಯಸ್‍ ಮುತ್ತ’ನಿಗೆ ಬೆಂಬಲವಾಗಿ ನಿಂತಿದ್ದಾರೆ.

ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಕ್ಕೆ ‘ಜೀನಿಯಸ್‍ ಮುತ್ತ’ ಎಂಬ ಹೆಸರಿಡಲಾಗಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಮಾಸ್ಟರ್ ಶ್ರೇಯಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಸಹ ಅಭಿನಯಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ನಾಗಿಣಿ ಭರಣ ಅವರಿಗೆ ಪರಿಚಯಸ್ಥರೆಲ್ಲರೂ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಒತ್ತಾಯಿಸುತ್ತಲೇ ಇದ್ದರಂತೆ. ‘ಒಮ್ಮೆ ನಿರ್ಮಾಪಕಿ ಲತಾ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ, ನೀವೇ ಚಿತ್ರ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಮಾಡಿದೆ. ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಈಗಾಗಲೇ ಒಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ನಾಗಿಣಿ ಭರಣ ತಿಳಿಸಿದರು.

ಒಬ್ಬ ಸಾಮಾನ್ಯ ಹುಡುಗ ತನ್ನ ಬುದ್ಧಿಶಂತಿಕೆಯಿಂದ ದೊಡ್ಡದನ್ನು ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ‘ಜೀನಿಯಸ್‍ ಮುತ್ತ’ನಾಗಿ ಶ್ರೇಯಸ್‍ ನಟಿಸಿದ್ದಾರೆ. ‘ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಅಭಿನಯಿಸಿದ್ದೇನೆ’ ಎಂದರು.

ನಾಗಾಭರಣ ಅವರಿಗೆ ತಾನು ಯಾವಾಗಲೂ ಆಭಾರಿ ಎನ್ನುವ ವಿಜಯ್‍ ರಾಘವೇಂದ್ರ, ‘ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ‘ಚಿನ್ನಾರಿ ಮುತ್ತ’ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎಂದು ವಿಜಯ ರಾಘವೇಂದ್ರ ತಿಳಿಸಿದರು.

‘ಜೀನಿಯಸ್‍ ಮುತ್ತ’ ಚಿತ್ರದಲ್ಲಿ ಮಾಸ್ಟರ್ ಶ್ರೇಯಸ್ಸ, ವಿಜಯ್ ರಾಘವೇಂದ್ರ, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಬಾಪು ಪದ್ಮನಾಭ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

2 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

3 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

3 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

4 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

4 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

8 hours ago