ಮನರಂಜನೆ

ನಟನೆ, ಬರವಣಿಗೆ ಆಯ್ತು; ಈಗ ನಿರ್ದೇಶದತ್ತ ರಂಜನಿ ರಾಘವನ್‍

ಕಳೆದ ವರ್ಷದ ಆರಂಭದಲ್ಲೇ, ತಮ್ಮ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರು ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್‍. ಆದರೆ, ಆ ಕನಸೇನು ಎಂಬುದನ್ನು ಅವರು ಹೇಳಿರಲಿಲ್ಲ. ಅದರ ಕುರಿತು ಮಾತನಾಡುವುದಕ್ಕೆ ಕೊನೆಗೂ ಸಮಯ ಬಂದಿದೆ. ವಿಷಯವೇನೆಂದರೆ, ರಂಜನಿ ಇದೀಗ ನಿರ್ದೇಶಕಿಯಾಗುತ್ತಿದ್ದಾರೆ. ಅವರ ನಿರ್ದೇಶನದ ಈ ಚಿತ್ರಕ್ಕೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಯೋಜಿಸುತ್ತಿದ್ದಾರೆ.

ತಮ್ಮ ಚೊಚ್ಚಲ ನಿರ್ದೇಶನದ ಚಿತ್ರದ ಕುರಿತು ಮಾತನಾಡಿರುವ ರಂಜನಿ, ‘ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸುವ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ತೋರಿಸುವತ್ತ ಕೆಲಸ ನಡೆದಿದೆ. ಹೊಸ ಕೆಲಸ ಅನ್ನುವುದಕ್ಕಿಂತ ಸಿನಿಮಾ ನಿರ್ದೇಶಕಿ ಆಗಬೇಕೆಂಬ ಕನಸು ಹೊತ್ತು ಬಹಳ ವರ್ಷಗಳೇ ಕಳೆದಿವೆ. ಈ ಕಥೆ ಹುಟ್ಟಿ ಎರಡು ವರ್ಷಗಳಾಗಿವೆ. ಒಂದೂವರೆ ವರ್ಷದಿಂದ ಇದರ ಚಿತ್ರಕಥೆಯನ್ನು ಬರೆದು ತಿದ್ದಿದ್ದೇನೆ. ಚಿತ್ರರಂಗದ ಹಲವಾರು ಜನರ ಸಹಾಯ ಮತ್ತು ಪ್ರೋತ್ಸಾಹದಿಂದ ಸಿನಿಮಾ ಬಗ್ಗೆ ಮಾತನಾಡುವ ಧೈರ್ಯ ಬಂದಿದೆ’ ಎಂದು ಹೇಳಿಕೊಂಡಿದ್ದಾರೆ.

‘ಸಂಗೀತ ಜ್ಞಾನಿ’ ಇಳಯರಾಜ ಈ ಚಿತ್ರದ ಭಾಗವಾಗಿರುವುದರ ಕುರಿತು ಮಾತನಾಡುವ ಅವರು, ‘2023ರ ಸೆಪ್ಟೆಂಬರ್‍ 13ರಂದು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು. ಅವರನ್ನು ಭೇಟಿ ಆಗಿ, ಕಾಲಿಗೆ ಬಿದ್ದು ಒಂದು ಫ಼ೋಟೋ ತೆಗೆಸಿಕೊಂಡು ಬಂದರೆ ಅದೇ ದೊಡ್ಡದು ಅಂತ ಅಂದುಕೊಂಡಿದ್ದೆ. ಈ ಚಿತ್ರದ ಕುರಿತು ಅವರನ್ನು ಮಾತನಾಡಿಸಿದಾಗ, ಅವರು ‘ಕನ್ನಡದಲ್ಲೇ ಕಥೆ ಹೇಳಮ್ಮ, ನನಗೆ ಕನ್ನಡ ಚೆನ್ನಾಗಿ ಬರುತ್ತೆ. ಕೊಲ್ಲೂರು ಮೂಕಾಂಬಿಕೆ ನನ್ನವ್ವ …’ ಎಂದು ಮಾತು ಶುರು ಮಾಡಿದರು. ಮೂರೇ ದಿನಗಳಲ್ಲಿ ಕಥೆ ಇಷ್ಟವಾಗಿದೆ ಎಂದು ನಮ್ಮ ಸಿನಿಮಾದ ಭಾಗವಾದರು’ ಎನ್ನುತ್ತಾರೆ ರಂಜನಿ.

ಸಿನಿಮಾ ಮಾಡುವಾಗ ಎಲ್ಲವೂ ಅಂದುಕೊಂಡಂತೆ ನಡೆಯುವುದಿಲ್ಲ ಎಂದು ಅರ್ಥ ಮಾಡಿಕೊಂಡಿರುವ ರಂಜನಿ, ‘ಒಳ್ಳೆಯ ಸಿನಿಮಾ ಆಗಲು ಅದಕ್ಕೇನು ಬೇಕೋ ಅದೇ ಪಡೆದುಕೊಳ್ಳುತ್ತದೆ ಎನ್ನುವ ನಂಬಿಕೆಯೂ ಅಚಲವಾಗಿದೆ. ಕನ್ನಡಿಗರ ಅಶೀರ್ವಾದ, ಸಹಕಾರವನ್ನ ಬೇಡುತ್ತಾ ಮುನ್ನಡೆಯುತ್ತಿದ್ದೇನೆ. ಡಾ. ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ’ ಎಂದು ಮಾಹಿತಿ ಕೊಡುತ್ತಾರೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಸದ್ದಿಲ್ಲದೆ ಶುರುವಾಗಿದೆ.

ಕಳೆದ ವರ್ಷ ‘ನೈಟ್‍ ಕರ್ಫ್ಯೂ’ ಮತ್ತು ‘ಕಾಂಗರೂ’ ಚಿತ್ರಗಳಲ್ಲಿ ನಟಿಸಿದ್ದ ರಂಜನಿ ಅಭಿನಯದ ಯಾವೊಂದು ಚಿತ್ರ ಸಹ ಆ ನಂತರ ಬಿಡುಗಡೆ ಆಗಲಿಲ್ಲ. ‘ಸತ್ಯಂ’ ಮತ್ತು ‘ಸ್ವಪ್ನ ಮಂಟಪ’ ಎಂಬ ಎರಡು ಚಿತ್ರಗಳಲ್ಲಿ ಅವರು ನಟಿಸಿದ್ದಾರಾದರೂ, ಆ ಚಿತ್ರಗಳು ಇನ್ನೂ ಬಿಡುಗಡೆಯಾಗಿಲ್ಲ.

ಭೂಮಿಕಾ

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

2 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

2 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

2 hours ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

2 hours ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

3 hours ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

3 hours ago