ಪ್ರಜ್ವಲ್ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ.
ಇದೀಗ ಮಿತ್ರ ಪಾತ್ರ ಬಹಿರಂಗವಾಗಿದ್ದು, ಅವರು ಈ ಚಿತ್ರದಲ್ಲಿ ವಿಲನ್ ಆಗಿ ನಟಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಅವರು ಮಹಾಬಲ ಎಂಬ ವಿಲನ್ ಆಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ತಮ್ಮ ಲುಕ್ ಸಹ ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 60 ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅದಕ್ಕಾಗಿ ತೂಕವನ್ನೂ ಇಳಿಸಿದ್ದಾರೆ. ಈ ಚಿತ್ರಕ್ಕಾಗಿ ಮೊದಲ ಬಾರಿಗೆ ಅವರು ಗಡ್ಡ ಬಿಟ್ಟಿದ್ದಾರೆ.
ಕಲಾವಿದರಾದವರು ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ಮತ್ತು ವಯಸ್ಸಿಗೆ ತಕ್ಕಂತೆ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಎಂಬುದು ಮಿತ್ರ ಅಭಿಪ್ರಾಯ. ಅದೇ ಕಾರಣಕ್ಕೆ ಕಾಮಿಡಿ ಪಾತ್ರಗಳಿಗೆ ಅವರು ಫುಲ್‍ಸ್ಟಾಪ್ ಹಾಕಿ, ಬೇರೆ ತರಹದ ಪಾತ್ರಗಳ ಹುಡುಕಾಟದಲ್ಲಿದ್ದಾರೆ. ಅದಕ್ಕೆ ಸರಿಯಾಗಿ, ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಮುಂದೆ ಸಹ ವಿಭಿನ್ನ ಪಾತ್ರಗಳ ಹುಡುಕಾಟದಲ್ಲಿ ಅವರಿದ್ದಾರೆ.
‘ಕರಾವಳಿ’ ನಂತರ ಮಿತ್ರ ಅವರನ್ನು ಹಲವರು ವಿಲನ್ ಪಾತ್ರಗಳಿಗಾಗಿ ಹುಡುಕಿಕೊಂಡು ಬರುತ್ತಿದ್ದಾರಂತೆ. ಇದೇ ಕಾರಣಕ್ಕೆ ಮಿತ್ರ ಹೊಸದಾಗಿ ಫೋಟೋಶೂಟ್ ಸಹ ಮಾಡಿಸಿದ್ದಾರೆ. ‘ಕರಾವಳಿ’ ಚಿತ್ರದ ಛಾಯಾಗ್ರಾಹಕ ಅಭಿಮನ್ಯು ಸದಾನಂದನ್, ಮಿತ್ರ ಅವರ ಹೊಸ ಫೋಟೋಶೂಟ್ ಮಾಡಿಕೊಟ್ಟಿದ್ದಾರೆ.
‘ಕರಾವಳಿ’ ಚಿತ್ರಕ್ಕೆ ಚಂದ್ರಶೇಖರ್ ಬಂಡಿಯಪ್ಪ ಕಥೆ-ಚಿತ್ರಕಥೆ ಬರೆದಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ರಾಣಿಗಳು ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಾದ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಸಂಪದ ಹುಲಿವಾನ ನಟಿಸುತ್ತಿದ್ದು, ಮಿಕ್ಕಂತೆ ಮಿತ್ರ, ‘ಸಿದ್ಲಿಂಗು’ ಶ್ರೀಧರ್, ಗೋವಿಂದೇಗೌಡ, ವಿದ್ಯಾ ಮೂರ್ತಿ ಮುಂತಾದವರು ನಟಿಸುತ್ತಿದ್ದಾರೆ.
ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…